ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಮತ್ತೆ ಮುರುಘಾ ಶ್ರೀ ಬಂಧನ

On: November 20, 2023 4:47 PM
Follow Us:
---Advertisement---

 ನವೆಂಬರ್.16ರಂದು ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು. ಆದ್ರೇ 2ನೇ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆಯೋ ಮುನ್ನವೇ ಬಿಡುಗಡೆ ಆಗಿದ್ದ ಕಾರಣ, ಅವರನ್ನು ಇಂದು ಜಾಮೀನು ಪಡೆದ 4 ದಿನಗಳಲ್ಲೇ ಮತ್ತೆ ಬಂಧಿಸಲಾಗಿದೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಕಳೆದ 14 ತಿಂಗಳುಗಳ ಕಾಲ ಜೈಲು ಸೇರಿದ್ದರು. ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿದ್ದಂತ ಅವರಿಗೆ ಕೆಲ ದಿನಗಳ ಹಿಂದಷ್ಟೇ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಆ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು.

ಜಾಮೀನಿನ ಮೇಲೆ ಬಿಡುಗಡೆಗೊಂಡಿರುವಂತ ಮುರುಘಾ ಶ್ರೀಗಳು 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೇ ಈ ಆದೇಶವನ್ನು ಪಾಲಿಸದೇ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದರು. ಇದನ್ನು ಸರ್ಕಾರಿ ವಕೀಲರು ಪ್ರಶ್ನಿಸಿದ್ದರು. ಜೊತೆಗೆ ಆದೇಶ ಉಲ್ಲಂಘನೆ ಸಂಬಂಧ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು.

ಸರ್ಕಾರಿ ವಕೀಲರ ಆಕ್ಷೇಪದ ನಂತ್ರ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಮುರುಘಾ ಶ್ರೀ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಈ ಹಿನ್ನಲೆಯಲ್ಲಿ ಇಂದು ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿದಂತ ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣೆಯ ಪೊಲೀಸರು, ಮುರುಘಾ ಶ್ರೀಗಳನ್ನು 2ನೇ ಪೊಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ.

Sathish munchemane

Join WhatsApp

Join Now

 

Read More