ಚಿಕ್ಕನಾಯಕನಹಳ್ಳಿ: ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದ ತಹಶೀಲ್ದಾರ್

0
58

ಚಿಕ್ಕನಾಯಕನಹಳ್ಳಿ: ಜಮೀನನ್ನು ಭೂ ಪರಿವರ್ತನೆ ಮಾಡಿಕೊಡಲು ₹30 ಸಾವಿರ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಗೀತಾ ಬುಧವಾರ ರಾತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

 

ತಾಲ್ಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಅವರಿಗೆ ಸೇರಿದ‌ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು ₹3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬುಧವಾರ ಬೆಳಗ್ಗೆ ₹20 ಸಾವಿರ ಹಣ ಪಡೆದಿದ್ದರು. ರಾತ್ರಿ 7.30 ರ ಸಮಯದಲ್ಲಿ ₹30 ಸಾವಿರ ಹಣ ತೆಗೆದುಕೊಳ್ಳುವಾಗ ತಮ್ಮ ಮನೆಯಲ್ಲಿಯೇ ಸಿಕ್ಕಿಬಿದ್ದಿದ್ದಾರೆ.

 

ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಗಳಾದ ರಾಮರೆಡ್ಡಿ, ಸುರೇಶ್ ಗೌಡ ಅವರ ನೇತೃತ್ವದ ತಂಡ ಕಾರ್ಯಚರಣೆ ನಡೆಸಿತ್ತು. ಗೀತಾ ಅವರನ್ನು ವಶಕ್ಕೆ ಪಡೆದಿದ್ದಾರೆ.