ತುಮಕೂರು: ಬೆಳ್ತಂಗಡಿ ಮೂಲದ ಮೂವರ ಮೃತದೇಹ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆ 

0
61

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿದ್ದಾ ಆ ಮೂರು ಜನರ ಹೆಸರು ತಿಳಿದು ಬಂದಿದೆ.

ಮೃತರನ್ನು ದಕ್ಷಿಣ ಕನ್ನಡ ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56) , ಶಿರ್ಲಾಲ್ ನಿವಾಸಿ ಇಮ್ತಿಯಾಝ್(34) ಎಂದು ಗುರುತಿಸಲಾಗಿದೆ.

 

ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಕೆರೆಗೆ ಕಾರು ತಳ್ಳಿರುವ ಶಂಕೆ ವ್ಯಕ್ತವಾಗಿದೆ. ಇಂದು ಸಾರ್ವಜನಿಕರು ಕೆರೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

 

 

 

ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.