Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಸುದ್ದಿ

ಕಾಲ್​​ ಗರ್ಲ್​ಗಾಗಿ ಕರೆ ಮಾಡಿ ಎಂದು ಫೇಸ್​​ಬುಕ್​ನಲ್ಲಿ ಪತ್ನಿಯ ಫೋಟೊ, ಮೊಬೈಲ್ ನಂಬರ್ ಪೋಸ್ಟ್ ಮಾಡಿದ ವ್ಯಕ್ತಿ!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 11 ವೀಕ್ಷಣೆಗಳು

2019ರಲ್ಲಿ ವಿವಾಹವಾಗಿದ್ದ ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಆರೋಪಿ ಪತ್ನಿ ವಿರುದ್ಧ ಸೇಡು ತೀರಿಸಲು ಫೇಸ್​​ಬುಕ್ಕಿನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಬೆಂಗಳೂರು, ಏಪ್ರಿಲ್ 11: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯಲ್ಲಿ ವ್ಯಕ್ತಿ ಒಬ್ಬ ಫೇಸ್ಬುಕ್​ನಲ್ಲಿ (Facebook) ಪೋಸ್ಟ್ ಮಾಡಿದ ವಿಲಕ್ಷಣ ವಿದ್ಯಮಾನ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಸದ್ಯ ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಂಪತ್ಯ ಕಲಹವೇ ಘಟನೆಗೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ಹಂತದ ತನಿಖೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿನಿ ಲೇಔಟ್ ವ್ಯಾಪ್ತಿಯ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು. 2019ರಲ್ಲಿ ವಿವಾಹವಾಗಿದ್ದ ಈ ದಂಪತಿ ಒಂದು ವರ್ಷದಿಂದ ಬೇರೆ ಬೇರೆಯಾಗಿದ್ದಾರೆ. ಕಳೆದ ಒಂದು ವರ್ಷದಿಂದ ಪತಿಯು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದುದರಿಂದ ಪತ್ನಿ ಆತನಿಂದ ದೂರವಾಗಿದ್ದಳು. ಇದನ್ನೇ ನೆಪ ಮಾಡಿಕೊಂಡಿದ್ದ ಆರೋಪಿ ಪತ್ನಿ ವಿರುದ್ಧ ಸೇಡು ತೀರಿಸಲು ಸಾಮಾಜಿಕ ಮಾಧ್ಯಮ ಫೇಸ್​​ಬುಕ್ಕಿನಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

‘ಕಲಾ ಶಶಿ’ ಎಂದು ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಿದ್ದ ಆರೋಪಿ ಅದರಲ್ಲಿ ಪತ್ನಿಯ ದೂರವಾಣಿ ಸಂಖ್ಯೆ, ಫೋಟೋ ಮತ್ತು ಆಕೆಯ ಸಹೋದರನ ಮೊಬೈಲ್ ಸಂಖ್ಯೆ ಕೂಡ ಪೋಸ್ಟ್ ಮಾಡಿದ್ದ. ಇಷ್ಟೇ ಅಲ್ಲದೆ, ಕಾಲ್ ಗರ್ಲ್ ಬೇಕಿದ್ದಲ್ಲಿ ಸಂಪರ್ಕಿಸಿ ಎಂದು ಪೋಸ್ಟ್ ಹಾಕಿದ್ದ. ಇದರಿಂದಾಗಿ ಸಂತ್ರಸ್ತೆ ಮತ್ತು ಆಕೆಯ ಸಹೋದರನಿಗೆ ಸಿಕ್ಕಾಪಟ್ಟೆ ಫೋನ್ ಕರೆಗಳು ಬರಲು ಆರಂಭವಾಗಿದ್ದವು.

ಇದರಿಂದ ಬೇಸತ್ತ ಸಂತ್ರಸ್ತೆ ಮತ್ತು ಆಕೆಯ ಸಹೋದರ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ

 

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment