ಅಖಿಲ ಭಾರತ ವೀರಶೈವ ಮಹಾಸಭೆಯ ಎರಡನೇ ಹಂತದ  ಚುನಾವಣಾ ಅಖಾಡ ಫಿಕ್ಸ್!?

0
175
Oplus_131072

 

ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಗುರುವಾರ (ಆ.1ರಂದು) ಚಾಲನೆ ಸಿಗಲಿದೆ.

ರಾಜ್ಯ ಘಟಕಗಳ ಅಧ್ಯಕ್ಷ, ಕಾರ್ಯನಿರ್ವಾಹಕ ಸಮಿತಿ ಸದಸ್ಯ ಮತ್ತು ಮಹಾಸಭೆಯ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಜು.21ರಂದು ಮೊದಲ ಹಂತದ ಚುನಾವಣೆ ಮುಗಿದಿದೆ. 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಆ.7ರ ಮಧ್ಯಾಹ್ನ 3 ಕೊನೆಯ ದಿನವಾಗಿರುತ್ತದೆ. ಆ.8ರಂದು ನಾಮಪತ್ರಗಳನ್ನು ಪರಿಶೀಲಿಸಲಿದ್ದು, ನಾಮಪತ್ರಗಳನ್ನು ವಾಪಾಸ್ ಪಡೆಯಲು ಆ.11 ಕೊನೆಯ ದಿನವಾಗಿದೆ.

ಆ.25ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಬಳಿಕ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಎರಡನೇ ಹಂತದಲ್ಲಿ ಕರ್ನಾಟಕ, ಕೇರಳ ಹಾಗೂ ಆಂಧ್ರಪ್ರದೇಶ ರಾಜ್ಯ ಘಟಕಗಳ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ ಸಮಿತಿ ಸದಸ್ಯರ ತಲಾ 41 ಸ್ಥಾನಗಳಿಗೆ

(ಅಧ್ಯಕ್ಷ-1, ಸಾಮಾನ್ಯ-27 ಮಹಿಳೆ-13) ಮತ್ತು ಅಖಿಲ ಭಾರತ ವೀರಶೈವ ಮಹಾಸಭೆಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕರ್ನಾಟಕ ರಾಜ್ಯಕ್ಕೆ 30 (23-ಸಾಮಾನ್ಯ, 7-ಮಹಿಳೆ) ಹಾಗೂ ಕೇರಳ, ಆಂಧ್ರಪ್ರದೇಶ,

ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಕೇಂದ್ರ ಕಾರ್ಯಕಾರಿ ಸಮಿತಿಗೆ ತಲಾ 5 (ಒಬ್ಬರು ಮಹಿಳೆ) ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.