ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ ಎರಡನೇ ಅತಿ ಉದ್ದದ ತೂಗುಸೇತುವೆಯನ್ನು ಇಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಲೋಕಾರ್ಪಣೆ ಮಾಡಿದ್ದಾರೆ.
ಇದಕ್ಕೂ ಮುನ್ನ ಸಚಿವ ಗಡ್ಕರಿ ಹೋಮದಲ್ಲಿ ಭಾಗವಹಿಸಿ, ಶರಾವತಿ ನದಿಗೆ ಬಾಗಿನ ಅರ್ಪಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ.ಧನಂಜಯ್ ಸರ್ಜಿ ಸೇರಿದಂತೆ ಹಲವುರು ಇದ್ದರು

1960ರಲ್ಲಿ ಶರಾವತಿ ನದಿಗೆ ಲಿಂಗನಮಕ್ಕಿ ಬಳಿ ಜಲಾಶಯ ನಿರ್ಮಾಣ ಮಾಡಲಾಯಿತು. ಆಗ ಇಲ್ಲಿನ ನಿವಾಸಿಗಳ ಹಲವಾರು ಭೂಮಿಗಳು ನೀರಿನಲ್ಲಿ ಮುಳುಗಿ ರೈತರ ಆರ್ಥಿಕ ವ್ಯವಸ್ಥೆ ಹದಗೆಟ್ಟಿತು. ಅದರ ಸರ್ಕಾರ
ಜಲಾಶಯ ನಿರ್ಮಾಣ ಕಾರ್ಯ
ಮಾಡಲಾಯಿತು. ಆಗ ಇಲ್ಲಿನ ನಿವಾಸಿಗಳ ಫಲವತ್ತಾದ ಭೂಮಿಗಳು ಹಿನ್ನೀರಿನಲ್ಲಿ ಮುಳುಗಡೆಯಾದವು. ನಂತರ ಅವರನ್ನು ಅಂದಿನ ಕರ್ನಾಟಕ ವಿದ್ಯುತ್ ನಿಗಮದವರು ರಾತ್ರೋರಾತ್ರಿ ಲಾರಿಯಲ್ಲಿ ತುಂಬಿಕೊಂಡು ಶಿವಮೊಗ್ಗ ತಾಲೂಕು, ಭದ್ರಾವತಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಬಿಟ್ಟು ಹೋಗಿದ್ದರು.
ಶರಾವತಿ ಹಿನ್ನೀರು ಈ ಭಾಗದ ಜನರ ಜೀವನವನ್ನೇ ಹಿಂಡಿ ಹಿಪ್ಪೆ ಮಾಡಿತ್ತು. ಸುತ್ತಲೂ ನೀರಿನಿಂದ ಕೂಡಿದ್ದರಿಂದ ಇಲ್ಲಿನ ಜನ ಹೊರಭಾಗಕ್ಕೆ ಸಂಪರ್ಕ ಕಳೆದುಕೊಳ್ಳಬೇಕಾಯಿತು. ಅನಾರೋಗ್ಯ, ಶಿಕ್ಷಣ ಸೇರಿದಂತೆ ಇತರೆ ಎಲ್ಲಾ ಮೂಲಭೂತ ಸೌಕರ್ಯಗಳಿಂದ ಜನರು ವಂಚಿತರಾಗಿದ್ದರು.
“ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ”
ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423.00 ಕೋಟಿ ಅನುದಾನದಲ್ಲಿ ದೇಶದ ಎರಡನೇ ಅತಿ ದೊಡ್ಡ ಸಂಪರ್ಕ ಸೇತುವೆ “ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು – ಕೊಲ್ಲೂರು (ಸ್ಥಳೀಯರ ಹೊಳೆಬಾಗಿಲು ಸೇತುವೆ)” ಸಂಪರ್ಕ ಕಲ್ಪಿಸುವ ಸೇತುವೆ ಇಂದು ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು ಹಾಗೂ ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಜೊತೆಗೂಡಿ ರಾಷ್ಟ್ರಕ್ಕೆ ಸಮರ್ಪಿಸಿದ ಭಾವನಾತ್ಮಕ ಕ್ಷಣ.
ನಿರಂತರ ಆರು ದಶಕಗಳ ಹಿನ್ನೀರಿನ ಪ್ರದೇಶದ ಬಂಧುಗಳ ಹೋರಾಟದ ಕೂಗನ್ನು ಆಲಿಸಿ ಕೇಂದ್ರ ಸರ್ಕಾರ ಸುಮಾರು 423 ಕೋಟಿ ಅನುದಾನ ಬಿಡುಗಡೆಗೊಳಿಸುವ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರ ಸಂಕಲ್ಪದ ಫಲ ನಿಸ್ವಾರ್ಥ ಪ್ರೀತಿಯ ಆಶೀರ್ವಾದ ಬಲದಿಂದ ಈ ಒಂದು ಐತಿಹಾಸಿಕ ಘಟನೆಗೆ ನಮ್ಮ ಮಲೆನಾಡು ಸಾಕ್ಷಿಯಾಗಿದೆ ಎಂದರೆ ಅತಿಶಯೋಕ್ತಿ ಆಗಲಾರದು.