Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

1.73 ಲಕ್ಷ ಹೆಕ್ಟೇರ್ ಅರಣ್ಯ ಜಮೀನು ಪರಿವರ್ತನೆ: ಪರಿಸರ ಸಚಿವಾಲಯ ಮಾಹಿತಿ.!

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 14 ವೀಕ್ಷಣೆಗಳು
Oplus_0

2014ರಿಂದ 2024ರವರೆಗೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಾಗಿ ಈ ಕ್ರಮ: ಕೇಂದ್ರ

  • ನವದೆಹಲಿ: ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗಾಗಿ 2014ರಿಂದ 2024ರ ಅವಧಿಯಲ್ಲಿ 1.73 ಲಕ್ಷ ಹೆಕ್ಟೇ‌ರ್ ಅರಣ್ಯ ಪ್ರದೇಶವನ್ನು ಪರಿವರ್ತಿಸಲಾಗಿದೆ. ಈ ಪೈಕಿ ಗಣಿಗಾರಿಕೆ ಹಾಗೂ ಜಲವಿದ್ಯುತ್ ಯೋಜನೆಗಳಿಗಾಗಿ ಅತಿ ಹೆಚ್ಚು ಅರಣ್ಯ ಜಮೀನು ಬಳಕೆಯಾಗಿದೆ ಎಂದು ಪರಿಸರ ಸಚಿವಾಲಯವು ಸಂಸತ್ತಿಗೆ ಸೋಮವಾರ ಮಾಹಿತಿ ನೀಡಿದೆ.

2014ರಿಂದ 2023ರ ಅವಧಿಯಲ್ಲಿ ಅರಣ್ಯ ಪ್ರದೇಶಗಳ ಪರಿವರ್ತನೆಯು ಶೇ 150ರಷ್ಟು ಹೆಚ್ಚಳವಾಗಿದೆ ಎಂಬ ವರದಿಯನ್ನು ಆಧರಿಸಿ ಕಾಂಗ್ರೆಸ್ ಸಂಸದ ಸುಖದೇವ್ ಭಗತ್ ಅವರು ಪ್ರಶ್ನೆ ಕೇಳಿದ್ದರು.

ಈ ಕುರಿತು ಉತ್ತರಿಸಿರುವ ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ ಸಿಂಗ್, ‘ಅರಣ್ಯ (ಸಂರಕ್ಷಣಾ) ಕಾಯ್ದೆ 1980ರ ಅಡಿಯಲ್ಲಿ 2014ರ ಏಪ್ರಿಲ್ 1ರಿಂದ 2024ರ ಮಾರ್ಚ್ 31ರ ವರೆಗೆ ಅರಣೇತರ ಉದ್ದೇಶಗಳಿಗಾಗಿ 1,73,984.3 ಹೆಕ್ಟೇ‌ರ್ ಅರಣ್ಯ ಪ್ರದೇಶವನ್ನು ಪರಿವರ್ತಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

40,096.17 ಹೆಕ್ಟೇ‌ರ್ ಪ್ರದೇಶವನ್ನು ಗಣಿಗಾರಿಕೆ ಹಾಗೂ ಕ್ವಾರಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಪರಿವರ್ತಿಸಿದರೆ, 40,138.31 ಹೆಕ್ಟೇ‌ರ್ ಪ್ರದೇಶ ವನ್ನು ಜಲ ವಿದ್ಯುತ್ ಯೋಜನೆ ಗಳಿಗಾಗಿ ಪರಿವರ್ತಸಿಲು ಅನುಮೋದಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ

  • ಜತೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ 30,605.59 ಹೆಕ್ಟೇ‌ರ್, ವಿದ್ಯುತ್ ಮಾರ್ಗಗಳ ಅಳವಡಿಕೆಗೆ 17,232.69 ಹೆಕ್ಟೇ‌ರ್, ರಕ್ಷಣಾ ಸಂಬಂಧಿತ ಯೋಜನೆಗೆ 14,968.14 ಹೆಕ್ಟೇರ್ ಮತ್ತು 9,669.28 ಹೆಕ್ಟೇರ್ ಅರಣ್ಯ ಜಮೀನ್ನು ಇತರೆ ಉದ್ದೇಶಗಳಿಗೆ ಪರಿವರ್ತಿಸಲಾಗಿದೆ ಎಂದೂ ಹೇಳಿದ್ದಾರೆ.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment