ಶಿವಮೊಗ್ಗ : ಶ್ರೀ ಅಭಿಷೇಕ್. ವಿ ಅವರು ದಿನಾಂಕ 06.09.2025 ರಂದು ಶಿವಮೊಗ್ಗ ಜಿಲ್ಲೆಗೆ ನೂತನ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಜಿಲ್ಲಾಡಳಿತದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು, ಸಾರ್ವಜನಿಕ ಹಿತಾಸಕ್ತಿ ಹಾಗೂ ಆಡಳಿತಾತ್ಮಕ ಕಾರ್ಯಗಳ ನಿರ್ವಹಣೆಗೆ ಅವರು ಮುಂದಿನ ದಿನಗಳಲ್ಲಿ ತೊಡಗಿಕೊಳ್ಳಲಿದ್ದಾರೆ.
ಇದಕ್ಕೂ ಮೊದಲು ಜಿಲ್ಲೆಗೆ ಸೇವೆ ಸಲ್ಲಿಸುತ್ತಿದ್ದ ಅಪರ ಜಿಲ್ಲಾಧಿಕಾರಿ ಸಿದಲಿಂಗರೆಡ್ಡಿ ಅವರ ಸ್ಥಳ ನಿಯೋಜನೆಯ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೊಸ ಅಧಿಕಾರಿಯ ಆಗಮನದಿಂದ ಆಡಳಿತ ಕಾರ್ಯಚಟುವಟಿಕೆಗಳು ಹೊಸ ಚೈತನ್ಯ ಪಡೆದುಕೊಳ್ಳುವ ನಿರೀಕ್ಷೆಯಿದೆ.