ಶಿವಮೊಗ್ಗ: ಶಿವಮೊಗ್ಗದ ಲಯನ್ ಸಫಾರಿ ಬಳಿ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಹುಲ್ ಅಲಿಯಾಸ್ ರಂಗ (40) ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಆಯನೂರು ದಿಕ್ಕಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಇಸುಜು ಲಗೇಜ್ ವಾಹನ ರಾತ್ರಿ 11 ಗಂಟೆಯ ಸುಮಾರಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ವಾಹನದಲ್ಲಿ ನಾಲ್ವರು–ಐವರು ಇದ್ದು, ಅಪಘಾತದಲ್ಲಿ ರಾಹುಲ್ ಅಲಿಯಾಸ್ ರಂಗ ಮೃತಪಟ್ಟಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಮೃತ ರಂಗ ವಿನೋಬ ನಗರ ನಿವಾಸಿ ಹಾಗೂ ರಂಗನಾಥ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದರು. ರಂಗನಾಥ್ ಅವರ ಅಕಾಲಿಕ ಸಾವಿನಿಂದ ವಿನೋಬ ನಗರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆ ತುಂಗನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 





