ಶಿವಮೊಗ್ಗದ ಭದ್ರಾವತಿ ತಾಲೂಕಿನ ಗಂಗೂರಿನ ವನಿಷಾ (21) ಎಂಬ ವಿದ್ಯಾರ್ಥಿನಿ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದ ವನಿಷಾ, ನೀರಿನ ಟ್ಯಾಂಕ್ ಪಕ್ಕದಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.
ಹಾಸ್ಟೆಲ್‌ನ ಇತರ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.






