ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ.!?

On: November 14, 2025 8:55 PM
Follow Us:
---Advertisement---

ಶಿವಮೊಗ್ಗ: ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಲಾಗಿದೆ ಎಂಬ ನಕಲಿ ಆದೇಶವೊಂದು ವೈರಲ್‌ ಆಗಿದೆ.

ಹಲವು ಜನಪ್ರತಿನಿಧಿಗಳು, ಶಿಕ್ಷಕರು, ಉಪನ್ಯಾಸಕರು ಈ ನಕಲಿ ಆದೇಶವನ್ನೇ ಅಸಲಿ ಎಂದು ಭಾವಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಿಂದ ಗೊಂದಲ ಉಂಟಾಗಿತ್ತು.

ನೀಜಾಂಶ ಏನು?

ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಸರ್ಕಾರ ಸಂತಾಪ ಸೂಚಿಸಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಆದರೆ ಶಾಲೆ, ಕಾಲೇಜುಗಳಿಗೆ ರಜೆ ಎಂಬ ನಕಲಿ ಅಧಿಸೂಚನೆ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿಧನರಾದಾಗ ರಜೆ ಘೋಷಿಸಲಾಗಿತ್ತು. ಆ ಅಧಿಸೂಚನೆಯನ್ನು ಕಿಡಿಗೇಡಿಗಳು ಎಡಿಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಇದು ವೈರಲ್‌ ಆಗಿದ್ದು, ನಿಜಾ ಎಂದೇ ಜನರು ಭಾವಿಸುವಂತಾಗಿದೆ. ಆದರೆ ಶಾಲೆ, ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿಲ್ಲ.  

Sathish munchemane

Join WhatsApp

Join Now

 

Read More