ಗೀತಾ ಜಯಂತಿ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಯೋಜಿಸಲಾದ ಬೃಹತ್ ಗೀತೋತ್ಸವ ಹಾಗೂ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಭಕ್ತಿಯಿಂದ ನೆರವೇರಿತು. ಈ ಧಾರ್ಮಿಕ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶೇಷವಾಗಿ ಪಾಲ್ಗೊಂಡಿದ್ದು, ಕಾರ್ಯಕ್ರಮಕ್ಕೆ ಅನನ್ಯ ಮಹತ್ತ್ವ ನೀಡಿತು. ಪಾರಾಯಣದ ವೇಳೆ ಉಡುಪಿಯ ಪವಿತ್ರ ವಾತಾವರಣ ಭಕ್ತಿ, ಶಾಂತಿ ಮತ್ತು ಧಾರ್ಮಿಕ ಉದಾತ್ತತೆಯಿಂದ ತುಂಬಿತ್ತು.
ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ, ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಸಂಸದರಾದ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಶಾಸಕರಾದ ಶ್ರೀ ಸುನಿಲ್ ಕುಮಾರ್, ಶ್ರೀ ಯಶ್‌ಪಾಲ್ ಸುವರ್ಣ, ಶ್ರೀ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಗುರುರಾಜ್ ಗಂಟಿಹೊಳೆ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
ಗೀತಾ ಪರಂಪರೆಯ ಮಹಿಮೆ ಮತ್ತು ಸಂಸ್ಕೃತಿಯ ಶ್ರೀಮಂತಿಕೆಯ ಸಂದೇಶ ಹರಡುವಲ್ಲಿ ಈ ಗೀತೋತ್ಸವ ಮಹತ್ವದ ಕ್ಷಣವಾಯಿತು.







