ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಬಳಿ ಪಲ್ಸರ್ ಬೈಕ್ ಮತ್ತು ಓಮಿನಿ ಕಾರಿನ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರ ನಜಿಮ್ (19) ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಜುಕಿ ಶೋರುವಿನಲ್ಲಿ ಕೆಲಸ ಮುಗಿಸಿ ಮನೆ ಕಡೆಗೆ ಹೊರಟಿದ್ದ ವೇಳೆ, ಎದುರಿನಿಂದ ಬಂದ ಓಮಿನಿ ಕಾರು ಬೈಕ್ಗೆ ಅಡ್ಡವಾಗಿ ಬಂದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ ಒಮಿನಿ ಚಾಲಕ ಸ್ಥಳದಿಂದ ಪರಾರಿ ಯಾಗಿರುವದಾಗಿ ಸ್ಥಳಿಯರು ಆರೋಪಿಸಿದ್ದಾರೆ ತಕ್ಷಣಕ್ಕೆ ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ನಜಿಮ್ಗೆ ನೆರವಾಗಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ತಲೆಗೆ ಗಂಭೀರ ಪೆಟ್ಟು ತಗುಲಿರುವುದರಿಂದ ಸ್ಥಳೀಯ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿಯಿದೆ.
ನಜಿಮ್ ಅವರ ಕುರಿತು ಹೆಚ್ಚಿನ ಮಾಹಿತಿ ಬರಬೇಕಿದೆ ಸ್ಥಳೀಯರು ಅಪಘಾತದ ಬಗ್ಗೆ ಅಗತ್ಯ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಅಧಿಕಾರಿಗಳು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.







