ಕರ್ನಾಟಕ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಇ ಖಾತಾ ವಿಚಾರದಲ್ಲಿ ಮಹತ್ವದ ಗುಡ್‌ನ್ಯೂಸ್ ಕೊಟ್ಟಿದೆ. ಆಸ್ತಿದಾರರು ಇ – ಖಾತಾ ಪಡೆದುಕೊಳ್ಳುವುದಕ್ಕೆ ಸಮಸ್ಯೆ ಆಗುತ್ತಿತ್ತು. ಇದೀಗ ಇ ಖಾತಾ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಅಪ್ಡೇಟ್ಸ್ ನೀಡಲಾಗಿದೆ.
ಈ ಹೊಸ ನಿಯಮವು ಇಂದಿನಿಂದಲೇ (ಡಿಸೆಂಬರ್ 18ರಿಂದಲೇ ಜಾರಿಗೆ) ಬರುತ್ತಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿಗಳ ಮಾರಾಟ ಹಾಗೂ ಖರೀದಿಯಲ್ಲಿ ಆಗುತ್ತಿರುವ ಮೋಸವನ್ನು ತಪ್ಪಿಸುವುದು ಹಾಗೂ ಪ್ರಾಪರ್ಟಿ ಟ್ಯಾಕ್ಸ್‌ನಿಂದ ಹೊರಗೆ ಉಳಿದವರನ್ನು ಪ್ರಾಪರ್ಟಿ ಟ್ಯಾಕ್ಸ್ ವ್ಯಾಪ್ತಿಗೆ ತರವುದು ಸೇರಿದಂತೆ ಹಲವು ಪ್ರಮುಖ ಕಾರಣಗಳಿಗೆ ಇ – ಖಾತಾ ಜಾರಿ ಮಾಡಲಾಗಿದೆ. ಇದೀಗ ಆಸ್ತಿದಾರರು ಮನೆಯಿಂದಲೇ ಇ – ಖಾತಾ ಮಾಡಿಸಿಕೊಳ್ಳುವುದಕ್ಕೆ ಬೇಕಾದ ಅವಕಾಶವನ್ನು ನೀಡಲಾಗಿದೆ. ಆಸ್ತಿದಾರರು ಇದೀಗ ತಮ್ಮ ಇ – ಖಾತಾವನ್ನು ಪಡೆದುಕೊಳ್ಳುವುದಕ್ಕೆ ಕಚೇರಿಗಳಿಗೆ ಅಲೆಯು ಅವಶ್ಯಕತೆ ಇಲ್ಲ. ಮನೆಯಿಂದಲೇ ಸರಳ ವಿಧಾನದ ಮೂಲಕ ಇ ಖಾತಾ ಪಡೆದುಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇ- ಖಾತಾಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ನಿಮ್ಮ ಮನೆಯಲ್ಲೇ ಕುಳಿತು ಇ ಖಾತಾ ಪಡೆದುಕೊಳ್ಳಿ. ಸಾರ್ವಜನಿಕರ ಆಸ್ತಿ ದಾಖಲೆ ಈಗ ಮತ್ತಷ್ಟು ಸುರಕ್ಷಿತ ಎಂದು ಹೇಳಲಾಗಿದೆ.
E Khata Update: ಮನೆಯಿಂದಲೇ ಇ – ಖಾತಾ ಪಡೆಯಲು ಬೇಕಾಗುವ ದಾಖಲೆಗಳು
1. ಮಾಲೀಕರ ಭಾವಚಿತ್ರ ಮತ್ತು ಅಧಾರ್
2. ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ
3. ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ಪಡೆದುಕೊಳ್ಳುವುದು)
4. ವಿದ್ಯುತ್ ಆರ್.ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ).
5. ಸ್ವತ್ತಿನ ಛಾಯಾಚಿತ್ರ
6. EC: 15/16
7. ಸ್ವತ್ತಿಗೆ ಸಂಬಂಧಿಸಿದ ಇತರ ಪೂರಕ ಅಗತ್ಯ ದಾಖಲೆಗಳು
45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ ಆಸ್ತಿ
ಕರ್ನಾಟಕ ಸರ್ಕಾರವು ಇ – ಖಾತಾ ಯೋಜನೆಯನ್ನು ಮೊದಲು ಬೆಂಗಳೂರಿನಲ್ಲಿ ಪರಿಚಯಿಸಿತ್ತು. ಇದೀಗ ಇ – ಖಾತಾ ಯೋಜನೆಯನ್ನು ಕರ್ನಾಟಕದಾದ್ಯಂತ ಪರಿಚಯಿಸಲಾಗಿದೆ. ನಗರದ 45 ಲಕ್ಷಕ್ಕೂ ಹೆಚ್ಚು ಆಸ್ತಿದಾರರ ಕರಡು ಆಸ್ತಿ ವಿವರಗಳನ್ನು ಇ – ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗಿವುದು ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನಾ ಸಚಿವ ಸುರೇಶ್ ಬಿ.ಎಸ್ ಅವರು ತಿಳಿಸಿದ್ದಾರೆ.
1. www.eaasthi.karnataka.gov.in Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು.
2. ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ / ತಕರಾರು ಅರ್ಜಿ ಸಲ್ಲಿಸಬಹುದು.
3. ಆನ್‌ಲೈನ್‌ನಲ್ಲೇ ಶುಲ್ಕ ಪಾವತಿ ದಾಖಲೆ ಸಲ್ಲಿಸಿ ಅನುಮೋದಿತ ಅಧಿಕೃತ ಇ – ಖಾತಾ ಪಡೆಯಬಹುದು.
4. K – 1 ಕೇಂದ್ರಗಳಲ್ಲೂ ಸಹ ಸಾರ್ವಜನಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು.
5. ಇ – ಖಾತಾ ಪಡೆಯುವ ಮೂಲಕ ಸರಳವಾಗಿ ಆಸ್ತಿ ತೆರಿಗೆಯನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
E Khata: ಇ -ಖಾತಾ: ಬೆಂಗಳೂರಿನಲ್ಲಿ ಹೊಸ ಸಮಸ್ಯೆ, ಜಿಬಿಎ ಲೆಕ್ಕಾಚಾರ ತಲೆಕೆಳಗೆ
ಕಾವೇರಿ 2 ಮತ್ತು ಇ-ಸ್ವತ್ತು
ಇನ್ನು ಕರ್ನಾಟಕದಲ್ಲಿ ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಹಾಗೂ ದಾನಪತ್ರಗಳ ನೋಂದಣಿ ಸ್ಥಗಿತವಾಗಿಲ್ಲ. ಆರ್‌ಟಿಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್‌ಎಮ್‌ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನಪತ್ರಗಳು ನೋಂದಣಿ ಆಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇ – ಖಾತಾ ಇಂದಿನಿಂದ ಹೊಸ ಮಾದರಿ ಜಾರಿ, ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್
On: December 18, 2025 3:19 PM
---Advertisement---






