ಶಿವಮೊಗ್ಗ, ಎಸ್ಪಿ ಮಿಥುನ್ ಕುಮಾರ್ ವರ್ಗಾವಣೆ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆಯ ಸುದ್ದಿಯೊಂದು ಹೊರಬಿದ್ದಿದೆ
ಶಿವಮೊಗ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2013 ರ ಬ್ಯಾಚ್ನ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಭುಲಿಂಗ ಕವಲಿಕಟ್ಟಿ ಧಾರವಾಡದವರು. 47ರ ಹರಯದ ಇವರು ಕರ್ನಾಟಕ ವಿಶ್ವವಿದ್ಯಾಲಯದದ ಬಿಬಿಎ ಪದವೀಧರರು.ಐಎಎಸ್ ಪಾಸಾದ ಬಳಿಕ ಮಂಗಳೂರು ಎಸಿಯಾಗಿ ಕೆಐಎಡಿಬಿಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡಿ ಉತ್ತರ ಕನ್ನಡದ ಡಿಸಿ ಆಗಿದ್ದರು.
ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ.
ಕೆಎಎಸ್ ಅಧಿಕಾರಿಯಾಗಿದ್ದ ಇವರು ಭಡ್ತಿ ಪಡೆದು ಐಎಎಸ್ ಆದವರು.






