ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕಾಯ೯ನಿರತ ಪತ್ರಕರ್ತರ ಸಂಘದ ಬೆಂಬಲ.!

On: May 21, 2026 1:09 PM
Follow Us:
---Advertisement---

ಜನಸಾಮಾನ್ಯರಿಗೆ ಸುಲಭ ನ್ಯಾಯಕ್ಕಾಗಿ ಸತ್ಯಾಗ್ರಹಕ್ಕೆ ಕೈಜೋಡಿಸಿದ ಕಾರ್ಯನಿರತ ಪತ್ರಕರ್ತರುಪತ್ರಕರ್ತರು

ಶಿವಮೊಗ್ಗ: ಮಲೆನಾಡು ಹಾಗೂ ಮಧ್ಯ ಕರ್ನಾಟಕ ಭಾಗದ ಜನರಿಗೆ ಕಡಿಮೆ ವೆಚ್ಚದಲ್ಲಿ ಮತ್ತು ಸುಲಭವಾಗಿ ನ್ಯಾಯ ದೊರಕುವಂತಾಗಬೇಕು ಎಂಬ ಉದ್ದೇಶದಿಂದ ಶಿವಮೊಗ್ಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ (Circuit Bench) ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ವಕೀಲರ ಹೋರಾಟಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಲವು ದಿನಗಳಿಂದ ಸರಣಿ ಹಕ್ಕೊತ್ತಾಯ ಸತ್ಯಾಗ್ರಹ ನಡೆಯುತ್ತಿದ್ದು, ಈ ಹೋರಾಟಕ್ಕೆ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಅದರ ಭಾಗವಾಗಿ ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಂಘದ ಸದಸ್ಯರು ನ್ಯಾಯಾಲಯದ ಆವರಣದಲ್ಲಿ ಸೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು, “ನ್ಯಾಯ ವ್ಯವಸ್ಥೆ ಜನರಿಗೆ ಸುಲಭವಾಗಿ ಲಭ್ಯವಾಗಬೇಕು. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿದಂತೆ ಮಲೆನಾಡು ಹಾಗೂ ಮಧ್ಯ ಕರ್ನಾಟಕ ಭಾಗದ ಜನರು ತಮ್ಮ ಪ್ರಕರಣಗಳಿಗಾಗಿ ದೂರದ ಬೆಂಗಳೂರಿಗೆ ತೆರಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಈದರ ನಡುವೆ ಮಂಗಳೂರಿಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆ ಮಾಡಿ ಶಿವಮೊಗ್ಗವನ್ನು ಮಂಗಳೂರಿಗೆ ಸೇರಿಸುವ ಮಾಹಿತಿ ಈದ್ದು

ಇದರಿಂದ ಸಾಮಾನ್ಯ ಜನರಿಗೆ ಸಮಯ ಮತ್ತು ಹಣದ ಭಾರ ಹೆಚ್ಚುತ್ತದೆ. ಹೀಗಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆ ಅವಶ್ಯಕವಾಗಿದೆ” ಎಂದು ಅಭಿಪ್ರಾಯಪಟ್ಟರು.

ಪ್ರಸ್ತುತ ರಾಜ್ಯದ ವಿವಿಧ ಭಾಗಗಳಿಂದ ನ್ಯಾಯಕ್ಕಾಗಿ ಬೆಂಗಳೂರಿಗೆ ತೆರಳುವ ಜನರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಗ್ರಾಮೀಣ ಭಾಗದ ರೈತರು, ಕಾರ್ಮಿಕರು ಮತ್ತು ಬಡ ವರ್ಗದ ಜನರಿಗೆ ನ್ಯಾಯಾಲಯದ ವ್ಯವಹಾರಕ್ಕಾಗಿ ಹಲವು ಬಾರಿ ಪ್ರಯಾಣ ಮಾಡಬೇಕಾಗುತ್ತದೆ. ಇದರಿಂದ ಆರ್ಥಿಕ ಹೊರೆ ಹೆಚ್ಚುವುದರ ಜೊತೆಗೆ ನ್ಯಾಯ ಪಡೆಯುವ ಪ್ರಕ್ರಿಯೆಯೂ ಕಷ್ಟಕರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಮಲೆನಾಡು ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂಬುದು ಹೋರಾಟಗಾರರ ಅಭಿಪ್ರಾಯವಾಗಿದೆ.

ಜನಪರ ಹಾಗೂ ಜನಹಿತದ ಉದ್ದೇಶ ಹೊಂದಿರುವ ಈ ಹೋರಾಟಕ್ಕೆ ಪತ್ರಕರ್ತರ ಸಂಘ ಬೆಂಬಲ ಸೂಚಿಸಿರುವುದು ಹೋರಾಟಗಾರರಲ್ಲಿ ಮತ್ತಷ್ಟು ಆತ್ಮವಿಶ್ವಾಸ ಮೂಡಿಸಿದೆ. ನ್ಯಾಯಾಂಗ ವ್ಯವಸ್ಥೆ ವಿಕೇಂದ್ರೀಕರಣಗೊಳ್ಳಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬರುತ್ತಿದ್ದು, ಈಗ ಅದು ಮತ್ತೊಮ್ಮೆ ಗಟ್ಟಿಯಾಗಿ ಕೇಳಿಬರುತ್ತಿದೆ.

ಸತ್ಯಾಗ್ರಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್. ಯು. ವೈದ್ಯನಾಥ, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್ ಟೆಲಕ್ಸ್, ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ದೇಷದ್ರಿ ಹೋಸಮನಿ, ಸತ್ಯನಾರಾಯಣ ಕೆ.ಆರ್ ಸೋಮನಾಥ  ಭರತ್ರಾಜ್ ಸಿಂಗ, ಗಾರ ಶ್ರೀನಿವಾಸ, ಶಣೈ, ಸತೀಶ್, ಸತೀಶ್ ಮುಂಚೆಮನೆ ಸೇರಿದಂತೆ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಅನೇಕ ಸದಸ್ಯರು ಭಾಗವಹಿಸಿ ವಕೀಲರ ನ್ಯಾಯಯುತ ಹೋರಾಟಕ್ಕೆ ಐಕ್ಯತೆ ವ್ಯಕ್ತಪಡಿಸಿದರು.

ಹೋರಾಟ ಮುಂದಿನ ದಿನಗಳಲ್ಲಿಯೂ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಮುಂದುವರಿಯಲಿದ್ದು, ಸರ್ಕಾರ ಜನರ ಹಿತದೃಷ್ಟಿಯಿಂದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

Sathish munchemane

Join WhatsApp

Join Now

 

Read More

Leave a Comment