ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಪನಿರ್ದೇಶಕರಾಗಿ ಸಿ.ಎಸ್. ಷಡಾಕ್ಷರಿ.!

On: June 18, 2026 8:52 PM
Follow Us:
---Advertisement---

ನೌಕರರ ಹಿತಕ್ಕಾಗಿ ಹೋರಾಡಿದ ಸಿ.ಎಸ್. ಷಡಾಕ್ಷರಿ ಅವರಿಗೆ ಶಿವಮೊಗ್ಗದಲ್ಲಿ ಆತ್ಮೀಯ ಸ್ವಾಗತ; ರಾಜಕೀಯ ವಲಯದಲ್ಲೂ ಚರ್ಚೆ

ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿಯವರು ನಿರ್ದೇಶಕರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಬೆಂಗಳೂರು ಇಲ್ಲಿನ ಕರ್ತವ್ಯದಿಂದ ಬಿಡುಗಡೆಗೊಂಡು, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಪನಿರ್ದೇಶಕರಾಗಿ ಶಿವಮೊಗ್ಗದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ.

ಸರ್ಕಾರಿ ನೌಕರರ ಸಂಘಟನೆಯಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿರುವ ಶ್ರೀ ಸಿ.ಎಸ್. ಷಡಾಕ್ಷರಿಯವರು ಈ ಹಿಂದೆ ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಹಲವಾರು ಪ್ರಮುಖ ಕಾರ್ಯಗಳನ್ನು ಕೈಗೊಂಡಿದ್ದರು.

ನೌಕರರ ವೇತನ, ಸೇವಾ ಸೌಲಭ್ಯಗಳು, ಬಡ್ತಿ, ವರ್ಗಾವಣೆ, ಪಿಂಚಣಿ ಹಾಗೂ ವಿವಿಧ ಆಡಳಿತಾತ್ಮಕ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆದು ಪರಿಹಾರಕ್ಕಾಗಿ ನಿರಂತರವಾಗಿ ಪ್ರಯತ್ನಿಸಿದ್ದರು. ನೌಕರರ ಹಕ್ಕುಗಳ ರಕ್ಷಣೆ, ಸಂಘಟನೆಯ ಬಲವರ್ಧನೆ ಹಾಗೂ ಉತ್ತಮ ಸೇವಾ ವಾತಾವರಣ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆಗಳನ್ನು ನೌಕರರ ವಲಯದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಗುತ್ತಿದೆ.

ನಂತರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಅವರು, ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ನೌಕರರ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ ಪರಿಹಾರ ಕಂಡುಕೊಳ್ಳಲು ಶ್ರಮಿಸಿದರು.

ಈ ನಡುವೆ ರಾಜಕೀಯ ವಲಯದಲ್ಲಿಯೂ ಶ್ರೀ ಸಿ.ಎಸ್. ಷಡಾಕ್ಷರಿಯವರ ಮುಂದಿನ ನಡೆ ಬಗ್ಗೆ ಚರ್ಚೆಗಳು ಆರಂಭಗೊಂಡಿವೆ.

ಕರ್ನಾಟಕದ ಸಿ.ಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದಾರೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಮುಂದಿನ ದಿನಗಳಲ್ಲಿ ಅವರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿ ಶಾಸಕರಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಶಿವಮೊಗ್ಗದ ಜನತೆಯಲ್ಲಿ ಚರ್ಚೆಯಾಗುತ್ತಿವೆ.

ಆದರೆ ಈ ಕುರಿತು ಅಧಿಕೃತ ಘೋಷಣೆ ಅಥವಾ ನಿರ್ಧಾರ ಹೊರಬಂದಿಲ್ಲ. ಸದ್ಯಕ್ಕೆ ಸರ್ಕಾರಿ ಸೇವೆಯ ಜವಾಬ್ದಾರಿಯನ್ನು ಮುಂದುವರಿಸಿರುವ ಶ್ರೀ ಷಡಾಕ್ಷರಿಯವರು ತಮ್ಮ ಆಡಳಿತಾತ್ಮಕ ಅನುಭವದ ಮೂಲಕ ಜನಸೇವೆ ಮತ್ತು ನೌಕರರ ಹಿತಕ್ಕಾಗಿ ಮುಂದುವರಿಯಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.

ಇದೀಗ ಶಿವಮೊಗ್ಗದಲ್ಲಿ ನೂತನ ಜವಾಬ್ದಾರಿ ಸ್ವೀಕರಿಸಿದ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಗಣ್ಯರು ಶ್ರೀ ಸಿ.ಎಸ್. ಷಡಾಕ್ಷರಿಯವರನ್ನು ಆತ್ಮೀಯವಾಗಿ ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ಕುಮಾರ್, ಕಾರ್ಯದರ್ಶಿಗಳಾದ ಆರ್. ಪಾಪಣ್ಣ, ರಂಗನಾಥ್, ನರಸಿಂಹಮೂರ್ತಿ, ವೇಣುಗೋಪಾಲ್, ಕೃಷ್ಣಮೂರ್ತಿ, ಪ್ರಸನ್ನ ಕುಮಾರ್, ದಿನೇಶ್, ಮಹೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Sathish munchemane

Join WhatsApp

Join Now

 

Read More

Leave a Comment