Friday, 13 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ರಾಜಕೀಯ

ಹೊಸ ಸಚಿವರು ಯಾರು..? ಕಾಂಗ್ರೆಸ್ ಹೈಕಮಾಂಡ್ ಸಭೆ ಬಳಿಕವೂ ಪಟ್ಟಿ ಗೌಪ್ಯ, ಡಿಕೆಶಿ ಇಂದು ಬೆಂಗಳೂರಿಗೆ ವಾಪಸ್.!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 34 ವೀಕ್ಷಣೆಗಳು

ನವದೆಹಲಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ.

ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದ ಹಿರಿಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿ ನೂತನ ಸಚಿವರ ಪಟ್ಟಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.

ಸಭೆ ಮುಕ್ತಾಯವಾದರೂ ಸಚಿವರ ಅಂತಿಮ ಪಟ್ಟಿಯನ್ನು ಬಹಿರಂಗಪಡಿಸಿಲ್ಲ. ಸಭೆಯ ಬಳಿಕವೂ ರಾಹುಲ್ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿರುವುದಾಗಿ ತಿಳಿದುಬಂದಿದೆ.

ಮೂಲಗಳ ಪ್ರಕಾರ, ಸಚಿವರ ಅಂತಿಮ ಪಟ್ಟಿಗೆ ಹೈಕಮಾಂಡ್ ಅನುಮೋದನೆ ದೊರೆತ ಬಳಿಕ ಭಾನುವಾರ ರಾತ್ರಿ ರಾಜ್ಯ ನಾಯಕರಿಗೆ ರವಾನಿಸುವ ಸಾಧ್ಯತೆ ಇದೆ. ಮತ್ತೊಂದೆಡೆ, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅಂತಿಮ ಪಟ್ಟಿಯೊಂದಿಗೆ ಭಾನುವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯೂ ಇದೆ.

ಕಳೆದ ನಾಲ್ಕು ದಿನಗಳಿಂದ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಲ್ಲೇ ಬೀಡುಬಿಟ್ಟಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಇದೇ ವೇಳೆ, ನೂತನ ಸಚಿವರ ಪ್ರಮಾಣವಚನ ಸಮಾರಂಭವು ಆಗಸ್ಟ್ 3ರಂದು ನಡೆಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಆದರೆ ಸಚಿವ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲ ಮಾತ್ರ ಇನ್ನೂ ಮುಂದುವರಿದಿದೆ.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment