ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ನಾನು ಹಿಂದೂ

On: November 18, 2023 2:04 PM
Follow Us:
---Advertisement---

ಇದೇ ಮೊಟ್ಟ ಮೊದಲ ಬಾರಿಗೆ ಒಕ್ಕಲಿಗ ಎಂದು ಬರೆಯುವ ಬದಲು ಹಿಂದೂ ಎಂದು ಬರೆದ ಎಚ್ ಡಿ ಕುಮಾರಸ್ವಾಮಿಯವರು,

ಈ ಸರಕಾರ ನನ್ನ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ಹೊರಟಿದೆ. ಇದಕ್ಕೆಲ್ಲ ಜಗ್ಗುವ ಪೈಕಿ ನಾನಲ್ಲ. ಇದನ್ನೆಲ್ಲ ಎದುರಿಸುವ ಶಕ್ತಿ ನನಗಿದೆ. ಜಂತಕಲ್ ಮೈನಿಂಗ್ ಇರಬಹುದು ಅಥವಾ ಬಿಡದಿಯ ನನ್ನ ಜಮೀನು ಇರಬಹುದು, ಯಾವುದರ ಬಗ್ಗೆಯೇ ಆಗಲಿ, ತನಿಖೆ ಮಾಡಿಸಲಿ. ಹೆದರಿಸಿದರೆ ಕುಮಾರಸ್ವಾಮಿ ಹೆದರಿಕೊಳ್ಳುತ್ತಾನೆ, ಹೆದರಿಸಿ ಅವರ ಬಾಯಿ ಮುಚ್ಚಿಸಬಹು ದು ಎಂದು ಯಾರಾದರೂ ನಂಬಿದ್ದರೆ ಅವರ ಮೂರ್ಖತನ.

ಈ ಹಿಂದೆಯೂ ಬಧಿಸುವ ಹುನ್ನಾರ ನಡೆದಿತ್ತು

ಹುಬೋಟ್ ವಾಚ್ ಪ್ರಕರಣ ಪ್ರಸ್ತಾಪ ಮಾಡಿದಾಗ ನನ್ನನ್ನು ಬಂಧನ ಮಾಡುವುದಕ್ಕೆ ಹಿಂದಿನ ಇದೇ ಕಾಂಗ್ರೆಸ್ ಸರಕಾರ ಹುನ್ನಾರ ನಡೆಸಿತ್ತು. ಪೊಲೀಸ್ ಅಧಿಕಾರಿಗಳಾದ ಚರಣ್ ರೆಡ್ಡಿ, ಕೆಂಪಯ್ಯ ನನಗೆ ನೊಟೀಸ್ ನೀಡಿದ್ದರು. ಕುಮಾರಸ್ವಾಮಿ ಯನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಅಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದರು.

ನಾನು ನಿರೀಕ್ಷಿಣಾ ಜಾಮೀನು ಪಡೆಯಲ್ಲ ಎಂದು ವಕೀಲರಿಗೆ ಹೇಳಿದ್ದೆ.

ನನ್ನ ವಕೀಲರು, ಹುಡುಗಾಟ ಆಡಬೇಡಿ ಎಂದು ಹೇಳಿದ್ದರು. ಬಂಧನ ಮಾಡಿದರೆ ಕುಮಾರಸ್ವಾಮಿಯನ್ನು ಬಂಧಿಸಿದರು ಎಂದಾಗುತ್ತದೆ,

ಏನಕ್ಕೂ ಬಂಧಿಸಿದರು, ಅದರ ಒಳ ಹುನ್ನಾರ ಏನು ಎಂಬುದು ಯಾರೂ ಹೇಳುವುದಿಲ್ಲ. ವರ್ಚಸ್ಸಿಗೆ ಧಕ್ಕೆ ತರುತ್ತಾರೆ. ಹೀಗಾಗಿ ನಿರೀಕ್ಷಣಾ ಜಾಮೀನು ಪಡೆದೆ. ಈಗಲೂ ನಾನು ಸವಾಲು ಹಾಕುತ್ತೇನೆ, ನನ್ನನ್ನು ಬಂಧನ ಮಾಡಲಿ ನೋಡೋಣ. ಏನೇನು ಇದೆ ಈ ಕೇಸಿನಲ್ಲಿ ಎನ್ನುವುದು ಎಲ್ಲರಿಗೂ ಗೊತ್ತಿದೆ. ಜಂತಕಲ್ ಕೇಸನ್ನು ಆದಷ್ಟು ಬೇಗ ತನಿಖೆ ಸತ್ಯವನ್ನು ತನಿಖೆ ಮಾಡಿ ಸತ್ಯವನ್ನು ಜನರಿಗೆ ತಿಳಿಸಲಿ ಎಂದು ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

Sathish munchemane

Join WhatsApp

Join Now

 

Read More