Friday, 13 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಜಿಲ್ಲಾ ಸುದ್ದಿ

ನ್ಯಾಷನಲ್ ಪಬ್ಲಿಕ್ ಶಾಲೆಯಿಂದ ಮ್ಯಾರಥಾನ್!

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 13 ವೀಕ್ಷಣೆಗಳು

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನ್ಯಾಷನಲ್ ಪಬ್ಲಿಕ್ ಶಾಲೆಯಿಂದ ಮ್ಯಾರಥಾನ್

ಶಿವಮೊಗ್ಗ: ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಇಲ್ಲಿನ ನ್ಯಾಶನಲ್ ಪಬ್ಲಿಕ್ ಶಾಲೆಯಿಂದ ಇದೇ ಜನವರಿ 13ರಂದು ‘ರನ್ ಫಾರ್ ಯೂತ್-ಯೂತ್ ಫಾರ್ ನೇಷನ್-ನೇಷನ್ ಫಾರ್ ಯೂತ್’ ಎಂಬ ಘೋಷಣೆಯೊಂದಿಗೆ ಮ್ಯಾರಥಾನ್ ಓಟ ಏರ್ಪಡಿಸಲಾಗಿದೆ ಎಂದು ನ್ಯಾಷನಲ್ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ಬಿ.ಜಿ. ಧನಲಕ್ಷ್ಮಿ ತಿಳಿಸಿದರು.

ಶಾಲೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ಘಟಕವಾದ ನ್ಯಾಷನಲ್ ಪಬ್ಲಿಕ್ ಶಾಲೆ ಮತ್ತು ಡೆಕಾಥ್ಲಾನ್, ಶಿವಮೊಗ್ಗ ಇವರ ಸಹಭಾಗಿತ್ವದಲ್ಲಿ ಈ ಮ್ಯಾರಥಾನ್ ಓಟ ಏರ್ಪಡಿಸಲಾಗಿದ್ದು, ಸುಮಾರು 1000 ವಿದ್ಯಾರ್ಥಿಗಳು ಮತ್ತು ಪೆÇೀಷಕರು ಭಾಗವಹಿಸಲಿದ್ದು ನಗರದ ಜನಮನ ಸೆಳೆಯುವುದರೊಂದಿಗೆ ಸ್ವಾಮಿ ವಿವೇಕಾನಂದರ ಸಂದೇಶವನ್ನು ಸಾರುವುದರಲ್ಲಿ ಸಾರ್ಥಕತೆಯನ್ನು ಮೆರೆಯಲಿದೆ ಎಂದರು.
ಅಂದು ಬೆಳಗ್ಗೆ 6 ಗಂಟೆಗೆ ಶಾಲಾ ಆವರಣ ದಿಂದ ಪ್ರಾರಂಭವಾಗುವ ಮ್ಯಾರಥಾನ್ ನಗರದ ಸಂಗೊಳ್ಳಿರಾಯಣ್ಣ ವೃತ್ತ, ಶಂಕರಮಠ ರಸ್ತೆ, ಎ.ಎ.ಸರ್ಕಲ್, ಸಿಟಿ ಸೆಂಟರ್ ಮಾಲ್, ಗೋಪಿ ಸರ್ಕಲ್, ಮಹಾವೀರ ವೃತ್ತ (ಕೋರ್ಟ್ ಸರ್ಕಲ್), ಕೆ.ಇ.ಬಿ ಸರ್ಕಲ್‍ನಿಂದ ಪುನಃ ಶಾಲಾ ಆವರಣ ಹೀಗೆ ಸುಮಾರು 5 ಕಿ.ಮೀ ದೂರವನ್ನು ಕ್ರಮಿಸಲಿದೆ ಎಂದ ಅವರು, ವಿದ್ಯಾರ್ಥಿಗಳು ಓಡಿ ದಣಿಯದೆ ನಡೆದು ಬಳಲದೆ ಉತ್ಸುಕರಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್.ನಾಗರಾಜ, ನ್ಯಾಷನಲ್ ಪಬ್ಲಿಕ್, ಶಾಲೆಯ ಪ್ರಾಂಶುಪಾಲೆ ಶ್ರೀಮತಿ ನವೀನ ಎಂ. ಪಾಯ್ಸ್ ಹಾಗೂ ಉಪಪ್ರಾಂಶುಪಾಲ ರಂಗನಾಥ ಮತ್ತು ಡೆಕಾಥ್ಲಾನ್ ವ್ಯವಸ್ಥಾಪಕ ಅಮೃತ್ ಇವರ ನಾಯಕತ್ವದಲ್ಲಿ ಮ್ಯಾರಥಾನ್ ಓಟ ನಡೆಯಲಿದ್ದು, ಈ ಮ್ಯಾರಥಾನ್‍ನಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಲೆಯ ಸಂಯೋಜಕರಾದ ಪದ್ಮಿನಿ, ಜಯಮಾಲಾ, ಸೌಮ್ಯ ಎಂ.ಡಿ., ಜಯಂತಿ, ಶಿಕ್ಷಕಿ ಗೀತಾ ಸಿ., ವಿದ್ಯಾರ್ಥಿಗಳಾದ ಕೃತಿಕಾ, ನಿಶ್ಚಯ್ ಎಂ.ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment