ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಶಿವಮೊಗ್ಗMurder Case : ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ; ಸ್ನೇಹಿತರೇ ಕೊಂದರೇ?

On: March 16, 2024 8:25 PM
Follow Us:
---Advertisement---

Murder Case : ಸ್ನೇಹಿತರು ಕರೆದರೆಂದು ಮನೆಯಲ್ಲಿ ಹೇಳಿ ಹೊರಟ ಯುವಕನೊಬ್ಬ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದಲ್ಲಿ ಈ ಘಟನೆ ನಡೆದಿದೆ.

ಶಿವಮೊಗ್ಗMurder Case : ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ; ಸ್ನೇಹಿತರೇ ಕೊಂದರೇ?
Murder Case : ಸ್ನೇಹಿತರು ಕರೆದರೆಂದು ಮನೆಯಲ್ಲಿ ಹೇಳಿ ಹೊರಟ ಯುವಕನೊಬ್ಬ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದಲ್ಲಿ ಈ ಘಟನೆ ನಡೆದಿದೆ.

ಶಿವಮೊಗ್ಗ: ಕಾರಿಗೆ ಬೆಂಕಿ ಹಚ್ಚಿ ಯುವಕನೊಬ್ಬನನ್ನು ಭೀಕರವಾಗಿ ಸುಟ್ಟು ಹಾಕಿದ (Youth Burnt and Killed) ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga News) ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ (Murder Case) ನಡೆದಿದೆ.

ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಘಟನೆ ನಡೆದಿದ್ದು, ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಕೊಲೆಯಾದ ದುರ್ದೈವಿ.

ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವೀರೇಶ್‌ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ.

ಕೆಲವು ಪರಿಚಿತ ವ್ಯಕ್ತಿಗಳೇ ವೀರೇಶ್‌ಗೆ ಫೋನ್‌ ಮಾಡಿ ಕರೆದುಕೊಂಡು ಹೋಗಿದ್ದರು. ಇನ್ನೊಬ್ಬ ಸ್ನೇಹಿತನ ಇನ್ನೋವಾ ಕಾರಿನಲ್ಲಿ ವೀರೇಶ್‌ ಹೋಗಿದ್ದರು. ತೋಗರ್ಸಿಗೆ ಹೋಗುತ್ತಿದ್ದೇನೆ, ಸ್ನೇಹಿತರು ಕರೆದಿದ್ದಾರೆ ಎಂದು ಹೇಳಿ ವೀರೇಶ್‌ ಹೋಗಿದ್ದರು. ಆದರೆ, ಈಗ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Sathish munchemane

Join WhatsApp

Join Now

 

Read More