ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಅನ್ನ ಬಲಿ ಪಡೆದ ಕೇಬಲ್ ವೈರ್

On: March 22, 2024 11:31 PM
Follow Us:
---Advertisement---

ತುಮಕೂರು : ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ನರ್ಸ್​ವೊಬ್ಬರನ್ನ ಬಲಿ ಪಡೆದಿದೆ. ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮಾ .22: ಸಾವು ಯಾವ ರೂಪದಲ್ಲಿ ಬರುತ್ತದೆಯೋ ಹೇಳಲು ಅಸಾಧ್ಯ. ಅದರಂತೆ ತುಮಕೂರು(Tumakuru) ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್​ವೊಬ್ಬರನ್ನ ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ.

ಘಟನೆಯ ವಿವರ

ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಲಕ್ಷ್ಮೀ ಬಾಯಿ ಅವರ ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾ

Sathish munchemane

Join WhatsApp

Join Now

 

Read More