ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ: ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಸಾವು

On: March 25, 2024 12:39 AM
Follow Us:
---Advertisement---

 

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

 

ದಾವಣಗೆರೆ, ಮಾರ್ಚ್​ 17: ಪಾನಿಪೂರಿ (Panipuri) ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ಮಾರ್ಚ್ 15ರಂದು ಜಿಲ್ಲೆ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ರಂಜಾನ್ ಹಬ್ಬ ಹಿನ್ನೆಲೆ ಮಕ್ಕಳು ಉಪವಾಸ ಇದ್ದರು. ನಂತರ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು

 

ವಾಂತಿ, ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

 

 

Sathish munchemane

Join WhatsApp

Join Now

 

Read More