Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತ್ವರಿತ ಸ್ಪಂದನೆ ಅಗತ್ಯ!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 12 ವೀಕ್ಷಣೆಗಳು
Oplus_131072

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತ್ವರಿತ ಸ್ಪಂದನೆ ಅಗತ್ಯ

ಮುದ್ದಿನಕೊಪ್ಪ ಗ್ರಾಮಕ್ಕೆ ಟ್ಯಾಂಕರ್ ಮೂಲಕ  ಹಲವು ದಿನದಿಂದ ನೀರು ಸರಬರಾಜು ಮಾಡಿದ್ದ ಮಾಲೀಕನಿಗೆ ಬಿಲ್ ಪಾಸ್ ಮಾಡದೆ ಗ್ರಾಮ ಪಂಚಾಯಿತಿಯಿಂದ ಕಾಲ್ಕಿತ್ತ ಪಂಚಾಯತಿ ಅಧ್ಯಕ್ಷ.

Oplus_131072

ಬರದ ಬವಣೆಯಿಂದ ತತ್ತರಿಸಿರುವ ರಾಜ್ಯವನ್ನು ಕುಡಿಯುವ ನೀರಿನ ಸಮಸ್ಯೆ ಬಾಧಿಸತೊಡಗಿದೆ. ಬೇಸಿಗೆಯ ಧಗೆಯಿಂದಾಗಿ ತಾಪಮಾನದಲ್ಲಿ ಭಾರಿ ಏರಿಕೆಯಾಗಿದೆ. ಕರಾವಳಿ, ಮಲೆನಾಡು, ಬಯಲುಸೀಮೆ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ ಬಿಸಿಲಿನ ಝಳಕ್ಕೆ ನಾಗರಿಕರು ತತ್ತರಿಸಿ
ಹೋಗಿದ್ದಾರೆ. ಹಗಲಿನ ಬಹುತೇಕ ಅವಧಿಯಲ್ಲಿ ಜನ ಮನೆಗಳಿಂದ ಹೊರ ಬರಲಾಗದಂತಹ ಸ್ಥಿತಿ ಇದೆ. ಮುದ್ದಿನಕೊಪ್ಪದ ಬಹುತೇಕ ಬೋರ್ವೆಲ್ ಗಳು ಬತ್ತಿಹೋಗಿವೆ.

ಹಿಗಿರುವಾಗ ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಹಲವು ದಿನದಿಂದ ಕುಡಿಯುವ ನೀರಿನ ಸಮಸ್ಯೆಯಾಗಿದ್ದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತಿಯ ಅಧ್ಯಕ್ಷರು ಸದಸ್ಯರುಗಳು ಸಮಸ್ಯೆಯ ಬಗ್ಗೆ ಚರ್ಚಿಸಿ ಟ್ಯಾಂಕರ್ ಮೂಲಕ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದರು,
ಕೆಲವು ದಿನದಿಂದ ಹೇಗೋ ಗ್ರಾಮದ ನೀರಿನ ಬವಣೆ  ಸದ್ಯದ ಮಟ್ಟಿಗೆ ಸರಿ ಹೋಗಿತ್ತು  ಆದರೆ ಇಂದಿನ ಮೀಟಿಂಗ್ನಲ್ಲಿ ಗ್ರಾಮಕ್ಕೆ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ ಟ್ಯಾಂಕರ್ ಮಾಲೀಕರಿಗೆ ಬಿಲ್ ಪಾಸ್ ಮಾಡಲು ಅಧ್ಯಕ್ಷರು ಒಪ್ಪದೇ ಗ್ರಾಮ ಪಂಚಾಯಿತಿಯಿಂದ ಕಾಲ್ಕಿತ್ತಿದ್ದಾರೆ ಸ್ಥಳದಲ್ಲೇ ಇದ್ದ ಸದಸ್ಯರು ಹಾಗೂ ಗ್ರಾಮಸ್ಥರು ಪಂಚಾಯಿತಿಗೆ ಬೀಗ ಜಡೆದು ಪ್ರತಿಭಟಿಸುತ್ತಿದ್ದಾರೆ ಸ್ಥಳಕ್ಕೆ ತಾಲೂಕು ಪಂಚಾಯಿತಿಯ ಇಓ ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ತನಕ ಪಂಚಾಯಿತಿಯ ಬೀಗ ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಹೇಳುತ್ತಿದ್ದು ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡುತ್ತಾರಾ ಅಥವಾ ಏನು ಎಂದು ಇನ್ನಷ್ಟೇ ಮಾಹಿತಿ ಬರಬೇಕಾಗಿದೆ.

ಶಿವಮೊಗ್ಗ ತಾಲೂಕು ಪಂಚಾಯಿತಿ EO ಅವಿನಾಶ್ ಅವರಿಗೆ ಪತ್ರಿಕೆ ಫೋನ್ ಮೂಲಕ ವಿಚಾರಿಸಿದಾಗ ಪಂಚಾಯಿತಿಯಲ್ಲಿ ನೀರು ಸರಬರಾಜು ಮಾಡಿದ ಟ್ಯಾಂಕರ್ ಮಾಲೀಕರಿಗೆ ಬಿಲ್ ಪಾಸ್ ಮಾಡಲು ಪಂಚಾಯತಿಯಲ್ಲಿ ಹಣದ ಕೊರತೆ ಇಲ್ಲ ಆದರೆ ಅಧ್ಯಕ್ಷರು ಮತ್ತು ಸದಸ್ಯರ ಗೊಂದಲದಿಂದ ಹೀಗಾಗಿದೆ ಹಾಗೂ ಅಧ್ಯಕ್ಷರೇ ನಮ್ಮ ಕಚೇರಿಗೆ ಈಗ ಬರುತ್ತಿದ್ದಾರೆ  ವಿಷಯದ ಬಗ್ಗೆ ಚರ್ಚಿಸುತ್ತಾರೆ ಈಗಲೇ ಬಿಲ್ ನಿರ್ವಹಣೆ ನಿರ್ಣಯ ಕೈಗೊಂಡು ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಇಓ ಅವಿನಾಶ್ ಅವರು ಪತ್ರಿಕೆಗೆ ತಿಳಿಸಿರುತ್ತಾರೆ.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment