ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ!?

On: May 21, 2024 1:21 PM
Follow Us:
---Advertisement---

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಮೇ 21 (ಕರ್ನಾಟಕ ವಾರ್ತೆ): ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಇವರು ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 1-07-2024 ರಿಂದ ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಆಯೋಜಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ ಹಾಗೂ ಬ್ಯಾಂಕ್‍ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು, ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿರುತ್ತದೆ. ತರಬೇತಿ ಪಡೆಯುವ ಆಭ್ಯರ್ಥಿಗಳಿಗೆ ಮಾಸಿಕ ರೂ.500 ಶಿಷ್ಯವೇತನ ನೀಡಲಾಗುವುದು ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪ.ಜಾತಿ/ಪ.ಪಂಗಡದ ಆಭ್ಯರ್ಥಿಗಳಿಗೆ ಮಾಸಿಕ ರೂ.600 ಶಿಷ್ಯವೇತನ ನೀಡಲಾಗುವುದು.
ಆಸಕ್ತ ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಕರ್ನಾಟಕ ಇನ್‍ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ ವಿನೋಬನಗರ 2ನೇ ಹಂತ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 15 ರೊಳಗಾಗಿ ಸಲ್ಲಿಸುವಂತೆ ಇನ್‍ಸ್ಟಿಟ್ಯೂಟ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-248873 ಮತ್ತು 7022429440 ಸಂಪರ್ಕಿಸುವುದು.

Sathish munchemane

Join WhatsApp

Join Now

 

Read More