ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಡೆಂಗ್ಯೂ ಜ್ವರದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್ (ನರ್ಸ್) ಹೇಮಾ (45) ಚಿಕಿತ್ಸೆ ಫಲಿಸದೇ ಸಾವು..!

On: July 24, 2024 2:23 PM
Follow Us:
---Advertisement---

ಡೆಂಗ್ಯೂ ಜ್ವರದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್ (ನರ್ಸ್) ಹೇಮಾ (45) ಚಿಕಿತ್ಸೆ ಫಲಿಸದೇ ಸಾವು

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್ (ನರ್ಸ್) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನೆನ್ನೆ ಸಂಜೆ ಮೃತಪಟ್ಟಿದ್ದಾರೆ.

ಈ ಮೂಲಕ, ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯಕೀಯ ಸಿಬ್ಬಂದಿಯೊಬ್ಬರಾಗಿದ್ದರು, ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವುದು ವಿಷಾದನೀಯವಾಗಿದೆ. ಅವರು ತಮ್ಮ ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ವೈದ್ಯರು ಕಂಬನಿ ಮಿಡಿದಿದ್ದು, ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಿಲಿ ಎಂದು ಪ್ರಾರ್ಥಿಸಿದ್ದಾರೆ.

Sathish munchemane

Join WhatsApp

Join Now

 

Read More