ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ

On: August 7, 2024 1:48 PM
Follow Us:
---Advertisement---

ಶಿವಮೊಗ್ಗ :  ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಕಾಯಕ ಕಿರಣ ಯೋಜನೆ, ಜೀವಜಲ ಯೋಜನೆ, ಶೈಕ್ಷಣಿಕ ಸಾಲ ಯೋಜನೆ (ಬಸವ ಬೆಳಗು ಯೋಜನೆ-ಹೊಸಬರು ಮತ್ತು ನವೀಕರಣ), ವಿದೇಶಿ ವಿದ್ಯಾ ವಿಕಾಸ ಯೋಜನೆ (ಹೊಸಬರು ಮತ್ತು ನವೀಕರಣ), ವಿಭೂತಿ ನಿರ್ಮಾಣ ಘಟಕ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಸವಿತಾ, ಒಕ್ಕಲಿಗ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ವೀರಶೈವ ಲಿಂಗಾಯತ ಜಾತಿ ಮತ್ತು ಉಪಜಾತಿ ಸಮುದಾಯಕ್ಕೆ ಸೇರಿದ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಯಾವುದಾದರೂ ಒಂದು ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್‌ನ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ರಲ್ಲಿ ದಾಖಲೆಗಳ ಸಹಿತ *ಆಗಸ್ಟ್ 31* ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kvldcl.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

Sathish munchemane

Join WhatsApp

Join Now

 

Read More