ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಗಣಪತಿ ತರಲು ಹೋದ.  20 ವರ್ಷದ ಧನುಷ್ ಹಾಗೂ ಶ್ರೀಧರ್ ಸಾವನ್ನಪ್ಪಿದ್ದಾರೆ.!

On: September 7, 2024 5:06 PM
Follow Us:
---Advertisement---

 

ಗಣಪತಿ ಮುರ್ತಿಯನ್ನ ತರಲು ಟಾಟಾ ಏಸ್ ವಾಹನದಲ್ಲಿ  ಹೋಗುತ್ತಿದ್ದ ವೇಳೆ ವಾಹನ ಪಲ್ಟಿ ಹೊಡೆದಿದ್ದು  ಇಬ್ಬರು ಯುವಕರು ಸ್ಥಳದಲ್ಲೇ ಸಾವು ಕಂಡರೆ ಇಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ಇಂದು  ವರದಿಯಾಗಿದೆ. 

Oplus_131072

ಲಿಂಗದಹಳ್ಳಿ ಪಟ್ಟಣದ 9 ಜನ ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಟಾಟಾ ಏಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದೆ. 
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಇನ್ನಿತರ ಮೂರು ಜನ ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ತೀವ್ರವಾದ ರಕ್ತಸ್ರಾವವಾಗಿ ಸಾವು ಬದುಕಿನ ಮದ್ಯ ಹೊರಟ ನಡೆಸಿದ್ದಾರೆ.

ಚಾಲಕ ಮನೋಜ್ ಹಾಗೂ ಮತ್ತೋರ್ವನನ್ನ ಮೆಗ್ಗಾನ್ ತುರ್ತುಘಟಕಕ್ಕೆ ರವಾನಿಸಲಾಗಿದೆ.  ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೋಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Sathish munchemane

Join WhatsApp

Join Now

 

Read More