ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ?…ಏನು ಕಾರಣ?

On: June 2, 2025 9:49 PM
Follow Us:
---Advertisement---

ಶಿವಮೊಗ್ಗ : ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.

ವಿಷ್ಣುಪ್ರಿಯಾ (22) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಸಮೀಪದ ಪುರಲೆ  ಸುಬ್ಬಯ್ಯ ಮೆಡಿಕಲ್ ಕಾಲೇಜು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿ ಇಂಟರ್ ಶಿಪ್  ಮುಗಿಸುವ ಹಂತದಲ್ಲಿದ್ದರು. ಕೇವಲ ಹತ್ತು ದಿನ ಬಾಕಿ ಇತ್ತು.

ಮೃತ ವಿದ್ಯಾರ್ಥಿನಿ ಮೂಲತಃ ಬೆಂಗಳೂರಿನವರಾಗಿದ್ದು, ಈಕೆಯ ಪೋಷಕರು ಬಹರೈನ್ ನಗರದಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರೇಮದ ವಿಚಾರದಲ್ಲಿ ಪೋಷಕರ ಜತೆ ಜಗಳದ ಶಂಕೆ

ಈ ವೈದ್ಯಕೀಯ ವಿದ್ಯಾರ್ಥಿನಿ ಪೋಷಕರೊಂದಿಗೆ ಪ್ರೇಮದ ವಿಚಾರದಲ್ಲಿ ಜಗಳ ಮಾಡಿಕೊಂಡು ಆತ್ಯಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ.  ವಿಷ್ಣುಪ್ರಿಯಾಳ ತಂದೆ ಮತ್ತು ತಾಯಿ ಬಹರೈನ್ ನಲ್ಲಿ ವಾಸಿಸುತ್ತಿದ್ದು, ತಮ್ಮ ಮಗಳ ಸಾವಿನ ಸುದ್ದಿ ಕೇಳಿ ಶಿವಮೊಗ್ಗದತ್ತ ಹೊರಟಿದ್ದಾರೆ.  ಈಕೆ  ಆಂಧ್ರ ಮೂಲದ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಇನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರ ತನಿಖೆಯಿಂದ ಸತ್ಯ ಏನೆಂಬುದು ಬಯಲಿಗೆ ಬರಬೇಕಿದೆ

Sathish munchemane

Join WhatsApp

Join Now

 

Read More