ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ನನ್ನ ಗೆಲುವು ನಿಶ್ಚಿತ: ಆಯನೂರು ಮಂಜುನಾಥ್

On: April 26, 2023 7:21 PM
Follow Us:
---Advertisement---

ಶಿವಮೊಗ್ಗ: ನಮ್ಮ ನಡೆ ಗೆಲುವಿನ ಕಡೆ. ನನ್ನ ಗೆಲುವು ಹತ್ತಿರವಾಗುತ್ತಿದೆ ಎಂದು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು.
ಅವರು ಇಂದು ನವುಲೆಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ. ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದೆ. ಪಕ್ಷಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಸಮುದಾಯಗಳ ಒಗ್ಗೂಡಿಸುವಿಕೆಯ ಕಾರ್ಯ ನಡೆಯುತ್ತಿದೆ. ಹೀಗಾಗಿ ನಾವು ಗೆಲುವಿಗೆ ತುಂಬಾ ಹತ್ತಿರ ಇದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಮಾತನಾಡಿ, ಆಯನೂರು ಮಂಜುನಾಥ್ ಗೆದ್ದೇ ಗೆಲ್ಲುತ್ತಾರೆ. ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್‍ಗೆ ಸೇರಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮತ್ತರವರ ತಂಡ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ತಮ್ಮ ಬಹುದೊಡ್ಡ ತಂಡವನ್ನೇ ಕರೆದುಕೊಂಡು ಬರುತ್ತಿದ್ದಾರೆ. ಈ ಬಾರಿ ಜೆಡಿಎಸ್‍ಗೆ ಬಹುದೊಡ್ಡ ಅವಕಾಶವಿದೆ. ಶಿವಮೊಗ್ಗ ನಗರವಲ್ಲದೆ ಗ್ರಾಮಾಂತರ, ಭದ್ರಾವತಿ, ಸೊರಬ ಸೇರಿದಂತೆ ಜಿಲ್ಲೆಯಲ್ಲಿ ಮೂರರಿಂದ ನಾಲ್ಕು ಸ್ಥಾನವನ್ನು ನಾವು ಪಡೆದೇ ಪಡೆಯುತ್ತೇವೆ ಎಂದರು.

 


ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ರಾಷ್ಟ್ರೀಯ ಪಕ್ಷಗಳ ನಡುವೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಈ ಬಾರಿ ರಾಜ್ಯದಲ್ಲಿಯೇ ಅತಿಹೆಚ್ಚು ಸ್ಥಾನ ಗಳಿಸಲಿದೆ. ಕುಮಾರಸ್ವಾಮಿಯವರ ಸರ್ಕಾರ ಆಡಳಿತ ನಡೆಸುತ್ತದೆ ಎಂಬ ಬಲವಾದ ವಿಶ್ವಾಸವಿದೆ. ಮೋದಿಯ ಅಲೆ ಸ್ಥಳೀಯವಾಗಿ ನಡೆಯದು. ಲೋಕಸಭಾ ಚುನಾವಣೆಯೇ ಬೇರೆ. ವಿಧಾನಸಭೆ ಚುನಾವಣೆಯೇ ಬೇರೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್ ಕಂಕಾರಿ, ಪಾಲಾಕ್ಷಿ, ಧೀರರಾಜ್ ಹೊನ್ನವಿಲೆ, ದೀಪಕ್ ಸಿಂಗ, ಮಹೇಶ್, ಉದಯ್, ಸುಬ್ಬೇಗೌಡ, ಬೊಮ್ಮನಕಟ್ಟೆ ಮಂಜು, ಮುಜೀಬ್, ನವಾಬ್, ಗಾಡಿಕೊಪ್ಪ ರಾಜಣ್ಣ, ಗೋವಿಂದಪ್ಪ, ಪುಷ್ಟಾ, ದಿವ್ಯಾ ಪ್ರವೀಣ್, ಡಾ. ಶಾಂತಾ ಸುರೇಂದ್ರ ಸೇರಿದಂತೆ ಹಲವರಿದ್ದರು.

Sathish munchemane

Join WhatsApp

Join Now

 

Read More