Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಜಿಲ್ಲಾ ಸುದ್ದಿ

ಡ್ರೋನ್ ಹಾಗೂ ನ್ಯಾನೋ ಯೂರಿಯಾ: ರೈತರಿಗೆ ನವೀಕರಿಸಿರುವ ಆಶಾಕಿರಣ.!?

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 17 ವೀಕ್ಷಣೆಗಳು

ಹಾರನಹಳ್ಳಿ ಹೋಬಳಿ, ರಾಮನಗರ ದಿನಾಂಕ: 01-08-2025 ಗ್ರಾಮೀಣ ಕೃಷಿಯಲ್ಲಿ ತಂತ್ರಜ್ಞಾನ  ಅಳವಡಿಕೆ ಇದು ಸಜೀವ ಉದಾಹರಣೆಯಾಗಿ, ಹಾರನಹಳ್ಳಿ ರಾಮನಗರ ಹಿರಿಯ ರೈತರು ನಾಗೋಜಿ ರಾವ್ ಅವರ ಮೆಕ್ಕೆಜೋಳದ ಜಮೀನಿನಲ್ಲಿ ಡ್ರೋನ್ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆಯ ಕ್ಷೇತ್ರ ಪ್ರದರ್ಶನ ನಡೆಯಿತು.

ಈ ಪ್ರಯೋಗವನ್ನು ಕೃಷಿ ಇಲಾಖೆ ಮತ್ತು ಇಫ್ಕೊ (IFFCO) ಸಂಸ್ಥೆ ಸಂಯುಕ್ತವಾಗಿ ಆಯೋಜಿಸಿದ್ದವು. ಡ್ರೋನ್ ತಂತ್ರಜ್ಞಾನದ ಮೂಲಕ ಗೊಬ್ಬರ ಸಿಂಪಡಣೆ ಮಾಡುವುದು, ರೈತರಿಗೆ ಅನುಕೂಲ, ದುಡಿಮೆ ಉಳಿತಾಯ ಮತ್ತು ಪರಿಸರಪಾಲನೆಯ ದೃಷ್ಟಿಯಿಂದ ಮಹತ್ತರ ಹೆಜ್ಜೆಯೆಂದು ಕೃಷಿ ಅಧಿಕಾರಿಗಳು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಉದ್ಘಾಟನಾ ಭಾಷಣದಲ್ಲಿ ಮಂಜುಳಾ, ಉಪ ಕೃಷಿ ನಿರ್ದೇಶಕರು ಮಾತನಾಡಿ, “ಹೆಚ್ಚು ಪ್ರಮಾಣದಲ್ಲಿ ರಾಸಾಯನಿಕ ಯೂರಿಯಾ ಬಳಕೆ ಭೂಮಿ ಹಾಗೂ ನೀರಿನ ಮೇಲಿನ ಪರಿಣಾಮವನ್ನು ಉಂಟುಮಾಡುತ್ತದೆ. ಆದರೆ ನ್ಯಾನೋ ಯೂರಿಯಾ ಬಳಕೆಯಿಂದ ಈ ದೋಷಗಳು ತಗ್ಗುತ್ತವೆ. ಕೇವಲ 500 ಮಿ.ಲೀ ನ್ಯಾನೋ ಯೂರಿಯಾ ಬಳಕೆ ಒಂದು ಎಕರೆಗೆ ಸಾಕಾಗುತ್ತದೆ. ಇದರ ಬೆಲೆ ರೂ.250 ಮಾತ್ರ. ಜೊತೆಗೆ ನ್ಯಾನೋ ಡಿಎಪಿ 600 ರೂ.ಗೆ ಲಭ್ಯವಿದೆ,” ಎಂದು ತಿಳಿಸಿದರು.

ಡ್ರೋನ್ ಬಳಕೆಯ ಪ್ರಯೋಜನಗಳ ಬಗ್ಗೆ ಅವರು ವಿವರವಾಗಿ ಮಾತನಾಡಿ: “ಒಂದು ಎಕರೆಗೆ ಸಿಂಪಡಿಸಲು ಕೇವಲ 6ರಿಂದ 8 ನಿಮಿಷಗಳು ಬೇಕು. ಇದು ರೈತರ ಸಮಯ ಉಳಿತಾಯಕ್ಕೆ ಮತ್ತು ಕೆಳಮಟ್ಟದ ಕೆಲಸಗಾರರ ಅವಲಂಬನೆಗೆ ಪರ್ಯಾಯವಾಗಿ ಬದಲಾಗುತ್ತದೆ. ಪ್ರತಿ ಎಕರೆ ಡ್ರೋನ್ ಸೇವೆಗೂ ಕೇವಲ 400 ರೂ ವೆಚ್ಚ ಮಾತ್ರ ಆಗುತ್ತದೆ,” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ಟಿ. ರಮೇಶ್ ಸಹಾಯಕ ಕೃಷಿ ನಿರ್ದೇಶಕರು, ಜಗದೀಶ್ ಕೃಷಿಕ ಸಮಾಜ ನಿರ್ದೇಶಕರು, ಜ್ಞಾನೇಶ್, ಕೃಷಿಕ ಸಮಾಜ ಸದಸ್ಯರು, ರಾಮಚಂದ್ರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಸೌರವ್, ಇಫ್ಕೊ ಸಂಸ್ಥೆಯ ಜಿಲ್ಲಾ ಪ್ರತಿನಿಧಿ.ಪ್ರತಿಮಾ. ಪಿ ಕೃಷಿ ಅಧಿಕಾರಿ. ನಾಗರಾಜ್ ತಾಲೂಕು ತಾಂತ್ರಿಕ ವ್ಯವಸ್ಥಾಪಕರು, ಹನುಮಂತಪ್ಪ, ಮಂಜಪ್ಪ, ಮಲ್ಲೇಶಪ್ಪ ಸೇರಿದಂತೆ ಹಲವಾರು ಸ್ಥಳೀಯ ರೈತರು ಭಾಗವಹಿಸಿದ್ದರು.

ಈ ಪ್ರಯೋಗದ ಮುಖಾಂತರ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳ ಪರಿಚಯವೂ ಆಯಿತು. ಪ್ರಪಂಚದ ಮಟ್ಟಿಗೆ ಸಹಕಾರ ನೀಡುತ್ತಿರುವ ನ್ಯಾನೋ ತಂತ್ರಜ್ಞಾನ, ಸ್ಥಳೀಯ ಮಟ್ಟದ ರೈತರ ಬೆಳೆ ಸುಧಾರಣೆಗೆ ಮಾರ್ಗದರ್ಶಿಯಾಗುತ್ತಿದೆ. ಇಂತಹ ಕಾರ್ಯಕ್ರಮಗಳ ಮೌಲ್ಯವರ್ಧನೆಗೆ ನಿರಂತರ ನೆರವು ಅಗತ್ಯವೆಂದು ಅಭಿಪ್ರಾಯ ವ್ಯಕ್ತವಾಯಿತು.

ಡ್ರೋನ್ ಅಪರೇಟರ್ ಸತೀಶ್

ಮೋ : ನಂ. 63631  07789

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment