ನಗರದ ರಾಯಲ್ ಆರ್ಕಿಡ್ ಹೋಟೆಲ್ ಹತ್ತಿರ ಭಾನುವಾರ ಬೆಳಗ್ಗೆ ದಾರುಣ ಅಪಘಾತ ಸಂಭವಿಸಿದೆ. ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಚಾಲಕರಾದ ದತ್ತಾತ್ರಿ ಅವರು ‘ನಮೋ ಯುವ ರನ್’ ಕಾರ್ಯಕ್ರಮ ಮುಗಿಸಿ ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ತಲೆಗೆ ತೀವ್ರ ಗಾಯಗಳಾಗಿವೆ.
ತಕ್ಷಣವೇ ರಕ್ತಸ್ರಾವವಾಗುತ್ತಿದ್ದ ಕಾರಣ ಕಾರ್ಯಕರ್ತರು ಅವರನ್ನು ನಗರದ ಸರ್ಜಿ ಆಸ್ಪತ್ರೆಗೆ ದಾಖಲು ಮಾಡಿದರು. ವೈದ್ಯಕೀಯ ತಂಡ ತುರ್ತು ಶಸ್ತ್ರಚಿಕಿತ್ಸೆ ಕೈಗೊಂಡು ತಲೆಗೆ ನಾಲ್ಕು ಸ್ಟಿಚ್ ಹಾಕಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಬಿಜೆಪಿ ಪ್ರಮುಖರು ಆಸ್ಪತ್ರೆಗೆ ಧಾವಿಸಿದರು. ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ನಗರ ಶಾಸಕರು ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್ಅರುಣ್, ಜಿಲ್ಲಾಧ್ಯಕ್ಷ ಜಗದೀಶ್, ಮೇಘರಾಜ್ ಸೇರಿದಂತೆ ಹಲವಾರು ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ ದತ್ತಾತ್ರಿ ಅವರ ಆರೋಗ್ಯ ವಿಚಾರಿಸಿದರು.
ಅಕಸ್ಮಿಕ ಘಟನೆಯಿಂದ ಪಕ್ಷದ ಕಾರ್ಯಕರ್ತರು ಆತಂಕಕ್ಕೊಳಗಾದರು. ಆಸ್ಪತ್ರೆಯಗೆ ಬಿಜೆಪಿಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗುಮಿಸುತ್ತಿದ್ದಾರೆ.