ಕೊಪ್ಪಳ ಜಿಲ್ಲೆಯ ಯಲಬುರ್ಗಾ ಹಾಗೂ ಕುಕನೂರ ತಾಲೂಕಿನ ಹವಳಿ ಪಟ್ಟಣ ಪಂಚಾಯತ್ ವತಿಯಿಂದ ಪೌರಕಾರ್ಮಿಕ ದಿನಾಚರಣೆ ಶ್ರೀ ಸಾಯಿ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸಮೃದ್ಧಿ ಕರ್ನಾಟಕ ಕಾರ್ಮಿಕರ ವೇದಿಕೆಯ ನೇತೃತ್ವದಲ್ಲಿ, ಜಿಲ್ಲಾ ಅಧ್ಯಕ್ಷರಾದ ಶಶಿಧರ್ ಹೊಸಮನಿ ಅವರು 25 ಮಂದಿ ಪೌರಕಾರ್ಮಿಕರನ್ನು ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಯಲಬುರ್ಗಾ ತಾಲೂಕು ಕಾರ್ಮಿಕರ ಸಂಘದ ಗೌರವಾಧ್ಯಕ್ಷರಾದ ಅಂದಪ್ಪ ಹಾಳಕೇರಿ, ಛತ್ರಪ್ಪ ಛಲವಾದಿ, ಡಿಕೆ ಪರಶುರಾಮ್, ಕನಕೇಶ್ ಪೈಂಟರ್, ಬಸಪ್ಪ ಐಬಿ, ತಿಪ್ಪಣ್ಣ ಮ್ಯಾಗೇರಿ, ಶಂಕರ್ ಜಕ್ಲಿ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.
ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗೇಶ್ ಕುಮಾರ್, ಪಟ್ಟಣ ಪಂಚಾಯತ್ ಅಧ್ಯಕ್ಷ ಅಂದಯ್ಯಜ್ಜ, ಸದಸ್ಯರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ವರದಿ: ಶಶಿಧರ್ ಹೊಸಮನಿ, ಕೊಪ್ಪಳ ಜಿಲ್ಲೆ, ಯಲಬುರ್ಗ.
 







