- ಶಿವಮೊಗ್ಗದ ಮೆಗ್ಗಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸರ್ಕಾರಿ ನೌಕರ ಲಕ್ಷ್ಮಣ (58) ಅವರು ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಇವರು ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿದ್ದರು ಎಂದು ತಿಳಿದುಬಂದಿದೆ. ಬುಧವಾರ ಸಂಜೆ ಕಲತ್ಗಿರಿ ದೇವಾಲಯಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳಿ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಲಕ್ಷ್ಮಣ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಇವರು ಶಿವಮೊಗ್ಗದ ಕಮಾಕ್ಷಿಬೀದಿ ಯಾವರಾಗಿದ್ದು ನರ್ಸ ಕ್ವಾಟ್ರಸನಲ್ಲಿ ವಾಸವಿದ್ದು ಈಗ ಶಿವಮೊಗ್ಗದ ಚಟ್ನಹಳ್ಳಿಯಲ್ಲಿ ಇತ್ತೀಚೆಗಷ್ಟೇ ಸ್ವಂತ ಮನೆ ನಿರ್ಮಿಸಿ ವಾಸವಿದ್ದರು, ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಅಪಘಾತದ ನಂತರ ಮೃತದೇಹವನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬದವರು ನಾಳೆ ತೀರ್ಮಾನಿಸಲಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
 






