ಶಿವಮೊಗ್ಗ: KUWJಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಹಿರಿಯ ಪತ್ರಕರ್ತ ಹಾಗೂ ನಮ್ಮ ನಾಡು ಪತ್ರಿಕೆಯ ವರದಿಗಾರ ಹೆಚ್.ಯು. ವೈದ್ಯನಾಥ್ (ವೈದ್ಯ) ಅವರು ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ, ದೂರದರ್ಶನ ಚಂದನ ವಾಹಿನಿಯ ವರದಿಗಾರ ಆರ್.ಎಸ್. ಹಾಲಸ್ವಾಮಿ ಅವರು ಪ್ರಧಾನ ಕಾರ್ಯದರ್ಶಿಯಾಗಿ, ಹಾಗೂ ನಮ್ಮ ನಾಡು ಪತ್ರಿಕೆಯ ಸಂಪಾದಕರಾದ ಕೆ.ವಿ. ಶಿವಕುಮಾರ್ ಅವರು ರಾಜ್ಯ ಸಮಿತಿಯ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ನಿರ್ದೇಶಕ ಸ್ಥಾನಕ್ಕೆ ಶಿಕಾರಿಪುರದ ನಮ್ಮ ಕನ್ನಡ ನಾಡು ಪತ್ರಿಕೆಯ ವರದಿಗಾರ ರಾಜರಾವ್ ಎಂ. ಜಾದವ್ ಅವರೇ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದ, ಚುನಾವಣಾಧಿಕಾರಿ ಶ್ರೀನಿವಾಸ್ ಅವರು ಅವರ ಆಯ್ಕೆಯನ್ನು ಪ್ರಕಟಿಸಿದರು.






