ಶಶಿಧರ್ ಹೊಸಮನಿಗೆ ದೆಹಲಿಯಲ್ಲಿ ಅದ್ದೂರಿ ಸನ್ಮಾನ
ದೆಹಲಿ:ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಶಶಿಧರ್ ಹೊಸಮನಿ ಅವರಿಗೆ ದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಪರಿಷತ್ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ–2025 ಪ್ರದಾನ ಮಾಡಿ ಅದ್ದೂರಿಯಾಗಿ ಸನ್ಮಾನಿಸಲಾಯಿತು.

ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಪರಿಷತ್‌ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಈ ಗೌರವ ಪ್ರದಾನ ನಡೆಯಿತು. ಸಮಾಜ ಸೇವೆ, ದಲಿತ ಚಳುವಳಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಶಶಿಧರ್ ಹೊಸಮನಿ ಅವರು ನೀಡಿರುವ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ಸಮೃದ್ಧಿ ಕರ್ನಾಟಕ ಕಾರ್ಮಿಕರ ವೇದಿಕೆ, ಕೊಪ್ಪಳ ಜಿಲ್ಲೆಯ ಅಧ್ಯಕ್ಷರು ಹಾಗೂ ಜನಶ್ರೀ ನ್ಯೂಸ್ ವಾರದಿಗಾರರು ಮಾತನಾಡಿ, ಶಶಿಧರ್ ಹೊಸಮನಿ ಅವರನ್ನು ಒಬ್ಬ ಸಮಾಜ ಸುಧಾರಕ ಹಾಗೂ ಆದರ್ಶ ಪ್ರಜೆಯಾಗಿ ಶ್ಲಾಘಿಸಿದರು. ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಪರಿಷತ್ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಮುಂದುವರಿಸುತ್ತಿರುವ ಶಶಿಧರ್ ಹೊಸಮನಿ ಅವರಿಗೆ ಈ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ ನೀಡಿರುವುದು ಅತ್ಯಂತ ಹೆಮ್ಮೆಯ ವಿಷಯ ಎಂದು ಅವರು ಹೇಳಿದರು.
ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ದಲಿತ ಚಳುವಳಿ ಮತ್ತು ದಲಿತ ಸಾಹಿತ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಸ್ಥಾಪಿತವಾದ ಸಂಸ್ಥೆಯಾಗಿದ್ದು, ದಲಿತ ಲೇಖಕರು, ಕವಿಗಳು ಹಾಗೂ ಸಾಹಿತಿಗಳಿಗೆ ಮಾರ್ಗದರ್ಶನ ನೀಡುತ್ತಾ ದಲಿತ ಜಾಗೃತಿಯನ್ನು ಹೆಚ್ಚಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಕನ್ನಡ ದಲಿತ ಸಾಹಿತ್ಯದ ಬೆಳವಣಿಗೆಯಲ್ಲಿಯೂ ಈ ಅಕಾಡೆಮಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಲಾಯಿತು.
ಶಶಿಧರ್ ಹೊಸಮನಿ ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ–2025 ದೊರೆತಿರುವುದು ಜಿಲ್ಲೆಯಿಗೂ ರಾಜ್ಯಕ್ಕೂ ಹೆಮ್ಮೆಯ ವಿಷಯವಾಗಿದೆ. ಈ ಗೌರವಕ್ಕೆ ಜನಶ್ರೀ ವಾಹಿನಿ ಹಾಗೂ ಸಾತ್ವಿಕ ನುಡಿ ಪತ್ರಿಕೆಯ ಮೂಲಕ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.







