ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ.! ‎

On: December 14, 2025 8:11 PM
Follow Us:
---Advertisement---

ದಾವಣಗೆರೆ: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.

 

ಇವರಿಗೆ ಗಣಿ ಮತ್ತು ಭೂವಿಜ್ಞಾನ ಸಚಿವರೂ ಆಗಿರುವ ಪುತ್ರ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸೇರಿದಂತೆ ಮೂವರು ಪುತ್ರರು. ನಾಲ್ವರು ಪುತ್ರಿಯರು ಹಾಗೂ ಸಂಸದೆ, ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಇದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಶಾಮನೂರು ಕಲ್ಲಪ್ಪ-ಸಾವಿತ್ರಮ್ಮ ದಂಪತಿ ಪುತ್ರರಾಗಿ 1931ರ ಜೂನ್‌ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ ಮೂಲತಃ ಉದ್ಯಮಿ. ರಾಜಕೀಯ ಕ್ಷೇತ್ರ ಪ್ರವೇಶಿಸಿದ ಇವರು 6 ಬಾರಿ ಶಾಸಕರಾಗಿ, ಸಚಿವರಾಗಿ ಹಾಗೂ ಒಮ್ಮೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಸುದೀರ್ಘ ಅವಧಿಗೆ ಕೆಪಿಸಿಸಿ ಖಜಾಂಚಿಯಾಗಿದ್ದರು.

1969ರಲ್ಲಿ ನಗರಸಭೆ ಮೂಲಕ ರಾಜಕೀಯ ಪ್ರವೇಶಿಸಿದ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಿ ಆಯ್ಕೆಯಾದರು. ಆಗ ಅವರಿಗೆ 63 ವರ್ಷ ವಯಸ್ಸಾಗಿತ್ತು. ಶಾಸಕರಾಗಿ, ಸಂಸದರಾಗಿ ನಿರಂತರವಾಗಿ ಆಯ್ಕೆಯಾದ ಇವರು ವಯಸ್ಸಾದಂತೆ ರಾಜಕಾರಣದಲ್ಲಿ ಮೇಲೇರಿದರು.

ಶಮನೂರು ಶಿವಶಂಕರಪ್ಪ 2012ರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಎದ್ದಾಗ ‘ವೀರಶೈವ-ಲಿಂಗಾಯತ’ ಎರಡೂ ಒಂದೇ ಎಂದು ಪ್ರಬಲವಾಗಿ ಪ್ರತಿಪಾದಿಸಿದರು. ಇವರ ಅವಧಿಯಲ್ಲಿ ವೀರಶೈವ ಮಹಾಸಭಾದ ಹೆಸರು ವೀರಶೈವ-ಲಿಂಗಾಯತ ಮಹಾಸಭಾ ಎಂಬುದಾಗಿ ಪರಿವರ್ತನೆಯಾಯಿತು.

ವೀರಶೈವ ಲಿಂಗಾಯತ ಮಠಾಧೀಶರನ್ನು ಒಗ್ಗೂಡಿಸಲು ಮುಂದಾಗಿದ್ದ ಶಾಮನೂರು ಶಿವಶಂಕರಪ್ಪ ಈ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದರು. ಮೊದಲ ಹೆಜ್ಜೆಯಾಗಿ ಪಂಚಪೀಠ ಮಠಾಧೀಶರ ಸಮ್ಮೇಳವನ್ನು ಆಯೋಜಿಸಿ ಯಶಸ್ಸು ಕಂಡಿದ್ದರು. ವಿರಕ್ತ ಮತ್ತು ಗುರುಪರಂಪರೆ ಒಗ್ಗೂಡಿದರೆ ಸಮಾಜ ಇನ್ನಷ್ಟು ಸಬಲವಾಗುತ್ತದೆ ಎಂಬ ಬಲವಾದ ನಂಬಿಕೆ ಅವರದಾಗಿತ್ತು.

Sathish munchemane

Join WhatsApp

Join Now

 

Read More