ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಶಿವಮೊಗ್ಗ  ನೂತನ ಡಿಸಿ ಪ್ರಭುಲಿಂಗ ಕವಳಕಟ್ಟಿ ಹಿನ್ನೆಲೆ ಏನು.!?

On: December 31, 2025 10:04 PM
Follow Us:
---Advertisement---

ಶಿವಮೊಗ್ಗ, ಎಸ್​ಪಿ ಮಿಥುನ್ ಕುಮಾರ್ ವರ್ಗಾವಣೆ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆಯ ಸುದ್ದಿಯೊಂದು ಹೊರಬಿದ್ದಿದೆ 

‎ಶಿವಮೊಗ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಪ್ರಭುಲಿಂಗ ಕವಲಿಕಟ್ಟಿ ಧಾರವಾಡದವರು. 47ರ ಹರಯದ ಇವರು ಕರ್ನಾಟಕ ವಿಶ್ವವಿದ್ಯಾಲಯದದ ಬಿಬಿಎ ಪದವೀಧರರು.ಐಎಎಸ್ ಪಾಸಾದ ಬಳಿಕ‌ ಮಂಗಳೂರು ಎಸಿಯಾಗಿ ಕೆಐಎಡಿಬಿಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡಿ ಉತ್ತರ ಕನ್ನಡದ ಡಿಸಿ ಆಗಿದ್ದರು.

‎ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

‎ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ.

ಕೆಎಎಸ್ ಅಧಿಕಾರಿಯಾಗಿದ್ದ ಇವರು ಭಡ್ತಿ ಪಡೆದು ಐಎಎಸ್ ಆದವರು.

Sathish munchemane

Join WhatsApp

Join Now

 

Read More