ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಜಿಲ್ಲೆ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆ  ಸಂಸದರಿಗೆ ಅಭಿನಂದನೆ ಸಲ್ಲಿಸಿದೇಕೆ.!?

On: March 2, 2026 5:23 PM
Follow Us:
---Advertisement---

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ: ಸಂಸದ ಬಿ.ವೈ. ರಾಘವೇಂದ್ರರಿಗೆ ಅಭಿನಂದನೆ.

ಶಿವಮೊಗ್ಗ ಜಿಲ್ಲೆಯ ನಾಗರಿಕರಿಗೆ ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಿದ ಲೋಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ಅವರಿಗೆ ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆಯ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಶಿವಮೊಗ್ಗ, ಸಾಗರ ಹಾಗೂ ಸಿರಸಿ ಪ್ರದೇಶಗಳಲ್ಲಿ ನಡೆದ ಮಾರಿಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಸುಗಮವಾಗಿ ಓಡಾಡಲು ಅನುಕೂಲವಾಗುವಂತೆ ಬೆಂಗಳೂರಿನಿಂದ ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಿಕೊಡುವಲ್ಲಿ ಸಂಸದರು ಪ್ರಮುಖ ಪಾತ್ರವಹಿಸಿದ್ದಾರೆ. ಈ ವ್ಯವಸ್ಥೆಯಿಂದ ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ಸಾವಿರಾರು ಜನರು ಸುರಕ್ಷಿತವಾಗಿ ಹಾಗೂ ಸುಲಭವಾಗಿ ಹಬ್ಬಗಳಿಗೆ ತೆರಳಿ ಮರಳಲು ಸಾಧ್ಯವಾಗಿದೆ.

ಈ ವಿಶೇಷ ರೈಲು ಸಂಚಾರ ವ್ಯವಸ್ಥೆಯ ಮೂಲಕ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಅನುಕೂಲವಾಗಿದ್ದು, ಜನಸಾಮಾನ್ಯರಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಸಮಯದಲ್ಲಿ ಸಾರ್ವಜನಿಕರ ಪ್ರಯಾಣದ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರ ಹಾಗೂ ರೈಲ್ವೆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಈ ಸೇವೆ ಒದಗಿಸಿರುವುದು ಜನಪರ ಆಡಳಿತದ ಉತ್ತಮ ಉದಾಹರಣೆಯಾಗಿದೆ ಎಂದು ಸಂಘದ ಮುಖಂಡರು ಅಭಿಪ್ರಾಯಪಟ್ಟರು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ವೇದಿಕೆಯ ಅಧ್ಯಕ್ಷರಾದ ರಾಮಕೃಷ್ಣ ಮೂಡ್ಲಿ ಹಾಗೂ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಸಿ.ಹೆಚ್. ಮಾಲತೇಶ್ ಅವರು ಸಂಸದ ಬಿ.ವೈ. ರಾಘವೇಂದ್ರ ಅವರಿಗೆ  ಅಭಿನಂದನೆ ಸಲ್ಲಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಡೆಯುವ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಸಂದರ್ಭದಲ್ಲಿಯೂ ಇದೇ ರೀತಿಯ ಸಹಕಾರವನ್ನು ಸಾರ್ವಜನಿಕರಿಗೆ ನೀಡುವಂತೆ ಅವರು ಮನವಿ ಮಾಡಿದರು.

ಈ ವಿಶೇಷ ರೈಲು ಸಂಚಾರ ವ್ಯವಸ್ಥೆಯಿಂದ ಪ್ರಯಾಣಿಕರು ಸುಗಮ, ಸುರಕ್ಷಿತ  ಪ್ರಯಾಣವನ್ನು ಅನುಭವಿಸಿದ್ದು, ಎಲ್ಲಾ ಪ್ರಯಾಣಿಕರ ಪರವಾಗಿ ಸಂಸದರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಾತ್ವಿಕ ನುಡಿ ಪತ್ರಿಕೆಯ ಮುಖಾಂತರ ಅಭಿನಂದನೆ ತಿಳಿಸಿದ್ದಾರೆ.

Sathish munchemane

Join WhatsApp

Join Now

 

Read More