ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ದುರ್ಘಟನೆ: ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿ ಲಾವಣ್ಯ ಮೃತ್ಯು.! ‎

On: March 12, 2026 5:21 PM
Follow Us:
---Advertisement---

ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗದ ಸಮೀಪ ಈಂದು ದುರ್ಘಟನೆ ಸಂಭವಿಸಿದ್ದು, ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿ ಲಾವಣ್ಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಲಗಳ ಪ್ರಕಾರ, ಲಾವಣ್ಯ ಅವರು ಸುಮಾರು 20 ದಿನಗಳ ಹಿಂದೆ ಸಿಮ್ಸ್ (SIMS) ಆಸ್ಪತ್ರೆಗೆ ಪಿ.ಜಿ ತರಬೇತಿಗಾಗಿ ಸೇರಿದ್ದರು. ಗುರುವಾರ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಆಸ್ಪತ್ರೆ ಆವರಣದಲ್ಲಿದ್ದ ನೀರಿನ ಟ್ಯಾಂಕ್ ಸಾಗಿಸುತ್ತಿದ್ದ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಈ ವೇಳೆ ದ್ವಿಚಕ್ರ ವಾಹನದ ಹಿಂದೆ ಕುಳಿತಿದ್ದ  ಜವೇರಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Sathish munchemane

Join WhatsApp

Join Now

 

Read More