ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಕರ್ನಾಟಕಸಿಎಂ ಸ್ಥಾನದ ಹಗ್ಗಜಗ್ಗಾಟಕ್ಕೆ ಬಿತ್ತು ಬ್ರೇಕ್:

On: May 18, 2023 12:41 PM
Follow Us:
---Advertisement---

ಕರ್ನಾಟಕಸಿಎಂ ಸ್ಥಾನದ ಹಗ್ಗಜಗ್ಗಾಟಕ್ಕೆ ಬಿತ್ತು ಬ್ರೇಕ್:big breaking news

ಸಿದ್ದು-ಸಿಎಂ, ಡಿಕೆಶಿ-ಡಿಸಿಎಂ; ಇಂದು ಶಾಸಕಾಂಗ ಸಭೆ
ಕರ್ನಾಟಕ ಮುಖಪುಟ ರಾಜಕೀಯರಾಜ್ಯ
ಸಿಎಂ ಸ್ಥಾನದ ಹಗ್ಗಜಗ್ಗಾಟಕ್ಕೆ ಬಿತ್ತು ಬ್ರೇಕ್: ಸಿದ್ದು-ಸಿಎಂ,
ಡಿಕೆಶಿ-ಡಿಸಿಎಂ;

ಇಂದು ಶಾಸಕಾಂಗ ಸಭೆ

ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಆಯ್ಕೆಯ ಬಳಿಕ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕರನ್ನು ಆಹ್ವಾನಿಸಲಾಗಿದೆ. ಇಂದು(ಮೇ 18) ಸಂಜೆ 7ಗಂಟೆಗೆ ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭೆ ಸದಸ್ಯರುಗಳು, ವಿಧಾನಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಗೆ ಎಲ್ಲಾ ಸದಸ್ಯರುಗಳು ತಪ್ಪದೇ ಭಾಗವಹಿಸಬೇಕಾಗಿ ಕೋರಲಾಗಿದೆ.

ಮೇ 13ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಪಟ್ಟಕ್ಕಾಗಿ ನಡೆದ ಮುಸುಕಿನ ಗುದ್ದಾಟ ಕೊನೆಗೂ ಕೊನೆಗೊಂಡಿದೆ. ದೆಹಲಿಯಲ್ಲಿ ಸರಣಿ ಸಭೆಗಳು, ಚರ್ಚೆಗಳು ನಡೆದ ಬಳಿಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಇತ್ತ ಸಿಎಂ ಆಕಾಂಕ್ಷಿಯಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಬುಧವಾರ ತಡರಾತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಜತೆಗೆ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡರು. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ, ನಿರ್ಧಾರಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಮೂಲಗಳು ತಿಳಿಸಿವೆ.

ತಲಾ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ. ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಅಧಿಕಾರ ನಡೆಸಲಿದ್ದಾರೆ. ನಂತರದ ಅವಧಿಗೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಇತರ ವಿಷಯಗಳಲ್ಲಿ ಒಮ್ಮತಕ್ಕೆ ಬರುವ ಸಲುವಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್ ಅವರು ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಎರಡೂವರೆ ವರ್ಷಗಳ ಬಳಿಕ ಅಧಿಕಾರ ಬಿಟ್ಟುಕೊಡುವ ವಾಗ್ದಾನವನ್ನು ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಡಬೇಕು ಎಂಬುದು ಡಿ.ಕೆ ಶಿವಕುಮಾರ್ ಅವರ ಷರತ್ತು ಎಂದು ಮೂಲಗಳು ಹೇಳಿವೆ.
ಗುರುವಾರ ಸಂಜೆ ನಡೆಯುವ ಶಾಸಕಾಂಗ ಸಭೆ ಬಳಿಕ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವ ವಿಚಾರವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಮುಖ್ಯಮಮತ್ರಿಯಾಗಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಿಂದ ಸಿದ್ದರಾಮಯ್ಯ ಹುಟ್ಟೂರಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಅಂತಿಮ; ಘೋಷಣೆಯೊಂದೇ ಬಾಕಿ
ಸಿಎಂ ಸ್ಥಾನದ ಹಗ್ಗಜಗ್ಗಾಟಕ್ಕೆ ಬಿತ್ತು ಬ್ರೇಕ್: ಸಿದ್ದು-ಸಿಎಂ, ಡಿಕೆಶಿ-ಡಿಸಿಎಂ; ಇಂದು ಶಾಸಕಾಂಗ ಸಭೆ

ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನದ ಆಯ್ಕೆಯ ಬಳಿಕ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕರನ್ನು ಆಹ್ವಾನಿಸಲಾಗಿದೆ. ಇಂದು(ಮೇ 18) ಸಂಜೆ 7ಗಂಟೆಗೆ ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ…
ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಅಂತಿಮ; ಘೋಷಣೆಯೊಂದೇ ಬಾಕಿ,,????

Sathish munchemane

Join WhatsApp

Join Now

 

Read More