ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

On: May 19, 2023 5:08 PM
Follow Us:
---Advertisement---

*ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ*
ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬೆಂಗಳೂರಿನ ಶ್ರೀ ಗುಬ್ಬಿ ತೋಟದಪ್ಪನವರ ಧರ್ಮಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಸತಿ ನಿಲಯದಲ್ಲಿ ಖಾಲಿಯಿರುವ ಸ್ಥಾನಗಳಿಗೆ ಅರ್ಹ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶಿವಮೊಗ್ಗ ನಗರದಲ್ಲಿ ವ್ಯಾಸಂಗ ಮಾಡುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯವನ್ನು 11 ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ.
ಅರ್ಜಿಯು ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಸತಿ ನಿಲಯ, ಡಾಲರ್ಸ್ ಕಾಲೋನಿ ಹಿಂಭಾಗ, ನವುಲೆಯಲ್ಲಿ ದೊರೆಯುತ್ತದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ : 9916278470 ಹಾಗೂ 9448231968 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿಯಾದ ಡಾ. ಶಿವಯೋಗಿ ಬಿ ಯಲಿ ತಿಳಿಸಿದ್ದಾರೆ.

Sathish munchemane

Join WhatsApp

Join Now

 

Read More