ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಸಚಿವ ಸ್ಥಾನ ಮಧು V\\S ಬೇಳುರೂ.! ಬಿಗ್ ಪೈಟ್.!?

On: July 3, 2026 11:47 AM
Follow Us:
---Advertisement---

ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ಜುಲೈ 5ಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ದೆಹಲಿಗೆ, ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಆರಂಭವಾಗಿದೆ. ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸಿ, ಸಚಿವ ಸ್ಥಾನ ವಂಚಿತರಿಗೆ ಸಮಾಧಾನ ಮಾಡಲು ಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ದೆಹಲಿ ತಲುಪಲಿದ್ದು, ಜುಲೈ 6 ಮತ್ತು 7ರಂದು ಎಐಸಿಸಿ ವರಿಷ್ಠರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಜುಲೈ 10ರಿಂದ 12ರ ಒಳಗಾಗಿ ಹೊಸ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸಂಪುಟದಲ್ಲಿ ಸ್ಥಾನ ಪಡೆಯಲು ಹಲವು ಹಿರಿಯ ಹಾಗೂ ಪ್ರಭಾವಿ ಶಾಸಕರು ತೀವ್ರ ಪೈಪೋಟಿ ನಡೆಸುತ್ತಿದ್ದು, ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಸಂಭಾವ್ಯರ ವಿವರ ಹೀಗಿದೆ.

ಶಿವಮೊಗ್ಗ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ: ಬೇಳೂರು ಗೋಪಾಲಕೃಷ್ಣ ಹೆಸರು ಮುನ್ನೆಲೆಗೆ? ಮಧು ಬಂಗಾರಪ್ಪ ಸ್ಥಾನ ಭದ್ರವೇ?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲೆಯ ರಾಜಕೀಯದಲ್ಲಿಯೂ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ಈ ಬಾರಿ ಶಿವಮೊಗ್ಗ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೆಸರೂ ಸಚಿವ ಸ್ಥಾನಕ್ಕೆ ಪರಿಗಣನೆಯಲ್ಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಇನ್ನೊಂದೆಡೆ, ಹಾಲಿ ಸಚಿವ ಮಧು ಬಂಗಾರಪ್ಪ ಅವರು ಸಚಿವ ಸ್ಥಾನದಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂಬ ಸುದ್ದಿಯೂ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆದರೆ, ಈ ಊಹಾಪೋಹಗಳನ್ನು ಅವರ ಬೆಂಬಲಿಗರು ತಳ್ಳಿಹಾಕಿದ್ದು, ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಮುಂದುವರಿಯುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಇದಕ್ಕೆ ಕಾರಣವಾಗಿ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಹಲವಾರು ವೇದಿಕೆಗಳಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರನ್ನು ತಮ್ಮ ರಾಜಕೀಯ ಗುರು ಎಂದು ಗೌರವದಿಂದ ಉಲ್ಲೇಖಿಸಿರುವುದನ್ನು ಬೆಂಬಲಿಗರು ನೆನಪಿಸುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಧು ಬಂಗಾರಪ್ಪ ಅವರ ನಡುವಿನ ಭೇಟಿಯೂ ರಾಜಕೀಯವಾಗಿ ಮಹತ್ವ ಪಡೆದಿದ್ದು, ಈ ಬೆಳವಣಿಗೆ ಸಚಿವ ಸಂಪುಟದಲ್ಲಿ ಅವರಿಗೆ ಮನ್ನಣೆ ದೊರೆಯುವ ಸಾಧ್ಯತೆಯನ್ನು ಹೆಚ್ಚಿಸಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಆದಾಗ್ಯೂ, ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕುರಿತು ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ತೆಗೆದುಕೊಳ್ಳಲಿದ್ದು, ಅಧಿಕೃತ ಘೋಷಣೆ ಹೊರಬರುವವರೆಗೆ ನಡೆಯುತ್ತಿರುವ ಎಲ್ಲ ಚರ್ಚೆಗಳು ರಾಜಕೀಯ ವಲಯದ ಊಹಾಪೋಹಗಳಷ್ಟೇ ಎಂಬುದು ಗಮನಾರ್ಹ.

ಯಾರಿಗೆಲ್ಲ ಸಿಗಲಿದೆ ಸಚಿವ ಸ್ಥಾನ?

ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗ: ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ ಅವರ ಹೆಸರಿದ್ದರೆ, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಪ್ರಸಾದ್ ಅಬ್ಬಯ್ಯ ಅವರು ಪ್ರಮುಖರಾಗಿದ್ದಾರೆ. ವಿಜಯಪುರ ಜಿಲ್ಲೆಯ ಜವಾಬ್ದಾರಿಗೆ ಯಶವಂತರಾಯ ಪಾಟೀಲ ಅಥವಾ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಇನ್ನು ಕಲ್ಯಾಣ ಕರ್ನಾಟಕ ಭಾಗದ ಮುಸ್ಲಿಂ ಪ್ರಾತಿನಿಧ್ಯಕ್ಕಾಗಿ ಸಲೀಂ ಅಹ್ಮದ್ ಅವರ ಹೆಸರನ್ನು ಪರಿಗಣಿಸಲಾಗಿದೆ.

ಮಧ್ಯ ಕರ್ನಾಟಕ ಭಾಗ: ಬಳ್ಳಾರಿ ಜಿಲ್ಲೆಯಲ್ಲಿ ನಾಗೇಂದ್ರ ಹಾಗೂ ಕೊಪ್ಪಳದಲ್ಲಿ ಬಸವರಾಜ ರಾಯರೆಡ್ಡಿ ಅವರ ಪ್ರಾತಿನಿಧ್ಯವಿದೆ. ಹಾವೇರಿ ಜಿಲ್ಲೆಯಲ್ಲಿ ರುದ್ರಪ್ಪ ಲಮಾಣಿ ಹಾಗೂ ಶಿವಮೊಗ್ಗದಲ್ಲಿ ಬೇಳೂರು ಗೋಪಾಲಕೃಷ್ಣ ಅವರ ಹೆಸರುಗಳಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ರಘುಮೂರ್ತಿ ಅವರಿದ್ದರೆ, ದಾವಣಗೆರೆ ಜಿಲ್ಲೆಗೆ ಎಸ್.ಎಸ್. ಮಲ್ಲಿಕಾರ್ಜುನ್ ಅಥವಾ ಡಿ.ಜಿ. ಶಾಂತನಗೌಡ ಅವರ ಹೆಸರುಗಳು ಲಭ್ಯವಿವೆ.

ಹಳೆಯ ಮೈಸೂರು ಮತ್ತು ಬಯಲುಸೀಮೆ ಭಾಗ: ತುಮಕೂರು ಜಿಲ್ಲೆಯಲ್ಲಿ ಶ್ರೀನಿವಾಸ್ (ವಾಸು) ಹಾಗೂ ಹಾಸನದಲ್ಲಿ ಶಿವಲಿಂಗೇಗೌಡ ಅವರ ಹೆಸರುಗಳಿವೆ. ಮಂಡ್ಯ ಜಿಲ್ಲೆಯ ಜವಾಬ್ದಾರಿಗೆ ಚಲುವರಾಯಸ್ವಾಮಿ ಮತ್ತು ನರೇಂದ್ರಸ್ವಾಮಿ ಅವರಿದ್ದರೆ, ಚಾಮರಾಜನಗರದಲ್ಲಿ ಪುಟ್ಟರಂಗಶೆಟ್ಟಿ ಅವರ ಹೆಸರಿದೆ. ಕೋಲಾರ ಜಿಲ್ಲೆಗೆ ಶರತ್ ಬಚ್ಚೇಗೌಡ ಅಥವಾ ಸುಬ್ಬಾರೆಡ್ಡಿ ಅವರ ಹೆಸರುಗಳು ಪರಿಗಣನೆಯಲ್ಲಿವೆ.

ಬೆಂಗಳೂರು ಮತ್ತು ಕರಾವಳಿ-ಮಲೆನಾಡು ಭಾಗ: ಬೆಂಗಳೂರು ನಗರದ ಪ್ರಾತಿನಿಧ್ಯಕ್ಕಾಗಿ ಜಮೀರ್ ಅಹಮದ್, ರಿಜ್ವಾನ್ ಅರ್ಷದ್ ಅಥವಾ ಲಿಂಗಾಯತ ಕೋಟಾದಡಿಯಲ್ಲಿ ಬಿ.ಕೆ.ಹರಿಪ್ರಸಾದ್/ಕೃಷ್ಣಪ್ಪ ಅವರ ಹೆಸರುಗಳು ಚರ್ಚೆಯಲ್ಲಿವೆ. ಚಿಕ್ಕಮಗಳೂರು ಜಿಲ್ಲೆಯಿಂದ ತರೀಕೆರೆ ಶ್ರೀನಿವಾಸ್ ಅವರ ಹೆಸರಿದ್ದರೆ, ಕರಾವಳಿ ತೀರದ ಉತ್ತರ ಕನ್ನಡ ಜಿಲ್ಲೆಗೆ ಮಂಕಾಳ ವೈದ್ಯ ಅಥವಾ ಆರ್.ವಿ. ದೇಶಪಾಂಡೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ.

ಶೀಘ್ರದಲ್ಲೇ ನಿಗಮ-ಮಂಡಳಿಗಳ ಹಳೇ ನೇಮಕಾತಿ ರದ್ದು?

ಸಂಪುಟ ವಿಸ್ತರಣೆಯ ಬೆನ್ನಲ್ಲೇ ಮತ್ತೊಂದು ಮಹತ್ವದ ರಾಜಕೀಯ ಬೆಳವಣಿಗೆ ನಡೆಯುವ ಮುನ್ಸೂಚನೆ ಸಿಕ್ಕಿದೆ. ದೆಹಲಿ ಪ್ರವಾಸ ಮುಗಿಸಿ ನಾಯಕರು ವಾಪಸಾದ ತಕ್ಷಣವೇ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಲಾಗಿದ್ದ ನಿಗಮ-ಮಂಡಳಿಗಳ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳ ಜವಾಬ್ದಾರಿ ನೀಡಿ ಅಸಮಾಧಾನ ತಣಿಸಲು ಹೈಕಮಾಂಡ್ ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

Sathish munchemane

Join WhatsApp

Join Now

 

Read More

Leave a Comment