Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಇದೀಗ ಬಂದ ಸುದ್ದಿ

ಕಾವೇರಿ ವಿಚಾರದಲ್ಲಿ ಜು. 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ: ವಿಜಯೇಂದ್ರ.!

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು

ಶಿವಮೊಗ್ಗ  ಕಾವೇರಿ ನೀರಿನ ವಿಚಾರದಲ್ಲಿ ರೈತರ ಹಿತಾಸಕ್ತಿಯನ್ನು ರಕ್ಷಿಸಲು ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಸಂಘಟನೆಗಳು ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟ ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಾಗಿರದೆ, ರೈತರ ಹಕ್ಕುಗಳಿಗಾಗಿ ನಡೆಯುವ ಜನಾಂದೋಲನವಾಗಿರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬುಧವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ತಮಿಳುನಾಡಿಗೆ ಕರ್ನಾಟಕವು ಪ್ರತಿದಿನ 3500 ಕ್ಯೂಸೆಕ್ಸ್ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಪಾರಸ್ಸು ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ದೊಡ್ಡ ಹೊಡೆತವಾಗಿದೆ. ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ ಇದೆ. ಇಂತಹ ಪರಿಸ್ಥಿತಿಯಲ್ಲಿಯೂ ನಿರಂತರವಾಗಿ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಬಿಡುವುದರಿಂದ ರಾಜ್ಯದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ.ರಾಜ್ಯ ಸರ್ಕಾರ ತತ್ ಕ್ಷಣವೇ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಿ ಕರ್ನಾಟಕದಲ್ಲಿನ ತೀವ್ರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಬೇಕು. ರಾಜಕೀಯ ಲಾಭಕ್ಕಾಗಿ ರೈತರ ಬದುಕಿನೊಂದಿಗೆ ಚೆಲ್ಲಾಟ ಆಡಬಾರದು ಎಂದರು.

400 ಕೋಟಿ ಮೊತ್ತದ ಭ್ರಷ್ಟಾಚಾರ

ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಕಾಂಗ್ರೆಸ್ ಸರ್ಕಾರ ಮೀಸಲಾತಿ ಹೆಸರಿನಲ್ಲಿ ನೇಮಕಾತಿ ವಿಳಂಬ ಮಾಡುತ್ತಿದೆ. ಪಶುವೈದ್ಯಾಧಿಕಾರಿ, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ ನೇಮಕಾತಿಗಳಲ್ಲಿ ಸುಮಾರು ರೂ. 400 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿದೆ. ಕೆಪಿಎಸ್‌ಸಿ ರಚಿಸಿರುವ ಆಂತರಿಕ ಸಮಿತಿಯಿಂದ ಸತ್ಯ ಹೊರಬರುವುದಿಲ್ಲ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಗೆ ದೊಡ್ಡ ಹೊಡೆತ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಕುರಿತು ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ದೊಡ್ಡ ಹೊಡೆತವಾಗಲಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ 70-80 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರೂ, ಸಿದ್ದರಾಮಯ್ಯ ಅವರ ಹೇಳಿಕೆಯ ಪರಿಣಾಮವಾಗಿ ಆ ಸಂಖ್ಯೆ 50-60 ಸ್ಥಾನಗಳಿಗೆ ಕುಸಿಯಲಿದೆ ಎಂದು ಹೇಳಿದರು.

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment