ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

‎ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬ: ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

On: August 16, 2026 9:45 AM
Follow Us:
---Advertisement---

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ರವೀಂದ್ರನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನದಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನೆರವೇರಿಸಿದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡುವ ಶಕ್ತಿ ಹಾಗೂ ಅವಕಾಶ ದೊರೆಯಬೇಕು ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದರು.

ವಿಶೇಷವಾಗಿ, ಮುಂದಿನ ದಿನಗಳಲ್ಲಿ ಶ್ರೀ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕು ಹಾಗೂ ಭವಿಷ್ಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡುವಂತಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಅಭಿಮಾನಿಗಳು ಪತ್ರಿಕೆಗೆ ತಿಳಿಸಿದರು.

ದೇಶ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಅವರು ಮತ್ತಷ್ಟು ಪ್ರಮುಖ ಪಾತ್ರ ವಹಿಸಬೇಕು. ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಅನುದಾನ, ಕೈಗಾರಿಕೆ, ಉದ್ಯೋಗ, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯ ಸಮಗ್ರ ಪ್ರಗತಿಗೆ ಶ್ರಮಿಸಬೇಕು ಎಂದು ಅವರು ಆಶಿಸಿದರು.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಸದ ಬಿ.ವೈ. ರಾಘವೇಂದ್ರ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ರಾಜಕೀಯ ಜೀವನದಲ್ಲಿ ಮತ್ತಷ್ಟು ಯಶಸ್ಸು ದೊರೆಯಲಿ ಎಂದು ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಅಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು, ಸಂಸದರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

Sathish munchemane

Join WhatsApp

Join Now

 

Read More

Leave a Comment