Sunday, 15 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಪತ್ರಿಕೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಗೌರವ: ಶ್ರೀಚಂದ್ರಕಾಂತ್, ಜೇಸುದಾಸ್ ಅವರಿಗೆ ಅಭಿನಂದನೆ ಇದೀಗ ಬಂದ ಸುದ್ದಿ ಸತ್ಯ, ಧರ್ಮ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿಯವರ ಜೀವನ ಮತ್ತು ಸಂದೇಶಗಳು ಸದಾ ಸ್ಪೂರ್ತಿ- ಬಿ ಲೋಕೇಶ್. ಜಿಲ್ಲಾ ಸುದ್ದಿ ಮಲೆನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕ ಶಿವಮೊಗ್ಗ ದಸರಾ
ಜಿಲ್ಲಾ ಸುದ್ದಿ

ನಂಜನಗೂಡಿನಲ್ಲಿ ಕೆಆರ್‌ಎಸ್ ಪಕ್ಷದ ಕಾರ್ಮಿಕ ಘಟಕ ರಚನೆ

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು

ನಂಜನಗೂಡು, ಆ.22: ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಕಮಿಟಿ ಹಾಗೂ ಮೈಸೂರು ಜಿಲ್ಲಾ ಗ್ರಾಮಾಂತರ ಘಟಕದ ವತಿಯಿಂದ ನಂಜನಗೂಡು ತಾಲ್ಲೂಕು ಕಾರ್ಮಿಕ ಘಟಕವನ್ನು ನೂತನವಾಗಿ ರಚಿಸಲಾಯಿತು.

ಕೆಆರ್‌ಎಸ್ ಪಕ್ಷದ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಸುಧಾಕರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂಜನಗೂಡು ತಾಲ್ಲೂಕು ಕಾರ್ಮಿಕ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ, ಸಂಘಟನೆಯ ಜವಾಬ್ದಾರಿಗಳನ್ನು ವಹಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಉಸ್ತುವಾರಿ ಕಾರ್ಯದರ್ಶಿ ರವಿಕುಮಾರ್ ಹಾಗೂ ಸಹ ಉಸ್ತುವಾರಿ ರವೀಂದ್ರ ಅವರು ಭಾಗವಹಿಸಿ, ನೂತನವಾಗಿ ರಚಿಸಲಾದ ತಾಲ್ಲೂಕು ಕಾರ್ಮಿಕ ಘಟಕದ ಪದಾಧಿಕಾರಿಗಳಿಗೆ ಹಾಗೂ ಪಕ್ಷಕ್ಕೆ ನೂತನವಾಗಿ ಸೇರ್ಪಡೆಗೊಂಡ ಪದಾಧಿಕಾರಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಅವರ ಹಕ್ಕುಗಳಿಗಾಗಿ ಸಂಘಟಿತವಾಗಿ ಧ್ವನಿ ಎತ್ತುವುದು ಪಕ್ಷದ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು. ನಂಜನಗೂಡು ತಾಲ್ಲೂಕಿನಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಮಿಕ ಘಟಕವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ನೂತನ ಪದಾಧಿಕಾರಿಗಳು ಪಕ್ಷದ ತತ್ವ, ಸಿದ್ಧಾಂತ ಹಾಗೂ ಕಾರ್ಮಿಕರ ಹಿತಾಸಕ್ತಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮುಖಂಡರು, ಕಾರ್ಯಕರ್ತರು ಮತ್ತು ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಂಜನಗೂಡಿನಲ್ಲಿ ಕಾರ್ಮಿಕ ಘಟಕದ ರಚನೆಯೊಂದಿಗೆ ತಾಲ್ಲೂಕಿನಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ವೇಗ ದೊರೆಯುವ ನಿರೀಕ್ಷೆ ವ್ಯಕ್ತವಾಯಿತು

ಮುಖ್ಯ ಸಂಪಾದಕರು (Chief Editor) ✍️ 736 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment