ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಜೆಡಿಎಸ್ ಪ್ರತಿಭಟನೆ.!?

On: September 18, 2026 4:09 PM
Follow Us:
---Advertisement---

ಕಸ್ತೂರಿ ರಂಗನ್ ವರದಿ ವಿರೋಧಿಸಿ ಜೆಡಿಎಸ್ ಪ್ರತಿಭಟನೆ: ಮಲೆನಾಡು ರೈತರ ಹಿತ ಕಾಪಾಡಲು ಸರ್ಕಾರಕ್ಕೆ ಆಗ್ರಹ

ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯಿಂದ ಮಲೆನಾಡು ಹಾಗೂ ಗ್ರಾಮೀಣ ಪ್ರದೇಶದ ರೈತರು, ಕೃಷಿ ಕಾರ್ಮಿಕರು ಮತ್ತು ಮೂಲ ಅರಣ್ಯ ನಿವಾಸಿಗಳಲ್ಲಿ ಆತಂಕ ಉಂಟಾಗಿದೆ. ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿ, ಜನರ ಬದುಕಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಜನತಾದಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂಯ೯ನಾಯ್ಕ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಯ ಅನ್ವಯ ಕರ್ನಾಟಕದ ಹತ್ತು ಜಿಲ್ಲೆಗಳ ಸುಮಾರು 44,448 ಚದರ ಕಿಲೋಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿರುವ 1,439 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸುವ ಪ್ರಸ್ತಾವನೆ ಇದೆ. ಇಂತಹ ಪ್ರದೇಶಗಳಲ್ಲಿ ಪರಿಸರಕ್ಕೆ ಧಕ್ಕೆಯಾಗುವ ಅಭಿವೃದ್ಧಿ ಚಟುವಟಿಕೆಗಳಿಗೆ ನಿರ್ಬಂಧ ಹಾಗೂ ಜನವಸತಿ ಸೇರಿದಂತೆ ವಿವಿಧ ಚಟುವಟಿಕೆಗಳ ಮೇಲೆ ನಿಯಂತ್ರಣ ವಿಧಿಸುವ ಪ್ರಸ್ತಾವನೆ ಜನರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ತಲ-ತಲಾಂತರಗಳಿಂದ ಮಲೆನಾಡು ಹಾಗೂ ಕಾಡಂಚಿನ ಪ್ರದೇಶಗಳಲ್ಲಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತರು ಮತ್ತು ಗ್ರಾಮೀಣ ಜನರ ಬದುಕಿನ ಮೇಲೆ ಇಂತಹ ನಿಯಮಗಳು ಪರಿಣಾಮ ಬೀರುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ ಹಾಗೂ ಸೊರಬ ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿನ 447 ಗ್ರಾಮಗಳ ಜನರಲ್ಲಿ ಆತಂಕ ಹೆಚ್ಚಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಸ್ತೂರಿ ರಂಗನ್ ವರದಿಯ ಕುರಿತು ರಾಜ್ಯ ಸರ್ಕಾರವು ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲು ಮುಂದಾಗಿರುವ ಹಿನ್ನೆಲೆಯಲ್ಲಿ, ಅಧಿವೇಶನದಲ್ಲಿ ವರದಿಯ ಕುರಿತು ಸಮಗ್ರ ಚರ್ಚೆ ನಡೆಸಬೇಕು. ರಾಜ್ಯದ ಮಲೆನಾಡು ಮತ್ತು ಗ್ರಾಮೀಣ ಪ್ರದೇಶದ ಜನರ ಹಿತದೃಷ್ಟಿಯಿಂದ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ನಿರ್ಣಯ ಕೈಗೊಂಡು, ಅಧಿಸೂಚನೆಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕೇರಳ ಮಾದರಿಯಲ್ಲಿ ಸ್ಥಳೀಯ ಮಟ್ಟದಲ್ಲಿ ಭೌತಿಕ ಸಮೀಕ್ಷೆ ನಡೆಸಿ, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸುವ ಅಥವಾ ಅವರ ಜೀವನೋಪಾಯಕ್ಕೆ ಧಕ್ಕೆ ತರುವ ಕ್ರಮ ಕೈಗೊಳ್ಳಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

Sathish munchemane

Join WhatsApp

Join Now

 

Read More

Leave a Comment