ಇದೀಗ ಬಂದ ಸುದ್ದಿ ಅಪರಾಧ ಸುದ್ದಿ ಜಿಲ್ಲಾ ಸುದ್ದಿ ರಾಜಕೀಯ ಲೋಕಲ್ ಸುದ್ದಿ ಸುದ್ದಿ ಆರೋಗ್ಯ ಆಧ್ಯಾತ್ಮಿಕ ಉದ್ಯೋಗ ಕ್ರೀಡೆ ಶಿಕ್ಷಣ

163 ಅಂಗನವಾಡಿ ಕೇಂದ್ರಗಳಲ್ಲಿ ‘ಅಂಗನವಾಡಿ ಉತ್ಸವ’

On: October 4, 2026 9:06 AM
Follow Us:
---Advertisement---

ಕಾರ್ಯಕರ್ತೆಯರಿಗೆ ಗೌರವ; ಅಡುಗೆ ಕುಕ್ಕರ್, ಚಾಪೆ ವಿತರಣೆ

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪಂಡಿತ್ ದೀನದಯಾಳ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಒಂದು ತಿಂಗಳ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಶಿವಮೊಗ್ಗ ನಗರದ 163 ಅಂಗನವಾಡಿ ಕೇಂದ್ರಗಳಲ್ಲಿ ವಿಶೇಷ ‘ಅಂಗನವಾಡಿ ಉತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಹಾಗೂ ಕಾರ್ಯನಿರ್ವಹಣೆಗೆ ನೆರವಾಗುವ ಉದ್ದೇಶದಿಂದ ಪ್ರತಿ ಕೇಂದ್ರಕ್ಕೂ ಉಪಯುಕ್ತವಾಗುವ ವಿಶೇಷ ಅಡುಗೆ ಕುಕ್ಕರ್‌ಗಳು ಹಾಗೂ ಚಾಪೆಗಳನ್ನು ವಿತರಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೈಕೆ, ಪೌಷ್ಟಿಕ ಆಹಾರ ವಿತರಣೆ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ನಗರದ ಗಾಡಿಕೊಪ್ಪ ಸರ್ಕಾರಿ ಶಾಲೆಯಲ್ಲಿ ನಡೆದ ‘ಅಂಗನವಾಡಿ ಉತ್ಸವ’ದ ಸಾಂಕೇತಿಕ ಉದ್ಘಾಟನೆಯನ್ನು ಶಿವಮೊಗ್ಗ ನಗರದ ಶಾಸಕ ಎಸ್. ಎನ್. ಚನ್ನಬಸಪ್ಪ ನೆರವೇರಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಆಶಾ ಕಾರ್ಯಕರ್ತೆಯರ ಸೇವೆಯನ್ನು ಗುರುತಿಸಿ ಅವರಿಗೂ ವಿಶೇಷ ಗೌರವ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸರ್ಕಾರದ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರು, ಮಕ್ಕಳು ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆರೋಗ್ಯ ಮತ್ತು ಪೌಷ್ಟಿಕತೆ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಇವರ ಸೇವೆ ಮಹತ್ವದ್ದಾಗಿದೆ ಎಂದು ತಿಳಿಸಿದರು.

ನಗರದ ಎಲ್ಲ 163 ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಪರಿಕರಗಳನ್ನು ಒದಗಿಸುವ ಮೂಲಕ ಅವುಗಳ ದೈನಂದಿನ ಕಾರ್ಯಚಟುವಟಿಕೆಗಳಿಗೆ ನೆರವು ನೀಡುವ ಉದ್ದೇಶವನ್ನು ಟ್ರಸ್ಟ್ ಹೊಂದಿದೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್. ಕೆ. ಜಗದೀಶ್, ಪ್ರಮುಖರಾದ ಗಾಡಿಕೊಪ್ಪ ಕುಮಾರ್, ಗಂಗಾ ನಾಯಕ್, ಶಾಂತಾ ಸುರೇಂದ್ರ, ನಗರ ಪ್ರಧಾನ ಕಾರ್ಯದರ್ಶಿಗಳಾದ ನವಲೆ ಮಂಜುನಾಥ್, ರಮೇಶ್ ನಾಯ್ಕ್, ದರ್ಶನ್, ಚಂದ್ರು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

— ಪಂಡಿತ್ ದೀನದಯಾಳ್ ಟ್ರಸ್ಟ್

Sathish munchemane

Join WhatsApp

Join Now

 

Read More

Leave a Comment