Saturday, 21 November 2026 — ಸಾತ್ವಿಕ ನುಡಿ

ಸಾತ್ವಿಕ ನುಡಿ

ಕನ್ನಡ ಸುದ್ದಿ ಅಂತರ್ಜಾಲ

ಹೊಸ ಸುದ್ದಿ
ಇದೀಗ ಬಂದ ಸುದ್ದಿ ಬಸವಣ್ಣನವರ ಅವಹೇಳನ ಸಹಿಸುವುದಿಲ್ಲ; ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ – ಬಸವ ಮರುಳಸಿದ್ಧ ಸ್ವಾಮೀಜಿ ಇದೀಗ ಬಂದ ಸುದ್ದಿ ಅತೀ ಹಿಂದುಳಿದ ಕಾಯಕ ಸಮುದಾಯಗಳ ಅಭಿವೃದ್ಧಿಗೆ ₹25 ಸಾವಿರ ಕೋಟಿ ಮೀಸಲಿಡಲು ಆಗ್ರಹ ಜಿಲ್ಲಾ ಸುದ್ದಿ ಭಕ್ತಿ, ಸಂಪ್ರದಾಯದ ಸೊಬಗಿನಲ್ಲಿ ಕಂಗೊಳಿಸಿದ ಕಾರ್ತಿಕ ದೀಪೋತ್ಸವ ಮಹಾಸಭಾ ನಗರ ಪಾಲಿಕೆ ಘಟಕದಿಂದ ಭಕ್ತಿಪೂರ್ವಕ ಆಚರಣೆ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ ಇದೀಗ ಬಂದ ಸುದ್ದಿ ಬಸವಣ್ಣನವರ ಅವಹೇಳನ ಸಹಿಸುವುದಿಲ್ಲ; ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ – ಬಸವ ಮರುಳಸಿದ್ಧ ಸ್ವಾಮೀಜಿ ಇದೀಗ ಬಂದ ಸುದ್ದಿ ಅತೀ ಹಿಂದುಳಿದ ಕಾಯಕ ಸಮುದಾಯಗಳ ಅಭಿವೃದ್ಧಿಗೆ ₹25 ಸಾವಿರ ಕೋಟಿ ಮೀಸಲಿಡಲು ಆಗ್ರಹ ಜಿಲ್ಲಾ ಸುದ್ದಿ ಭಕ್ತಿ, ಸಂಪ್ರದಾಯದ ಸೊಬಗಿನಲ್ಲಿ ಕಂಗೊಳಿಸಿದ ಕಾರ್ತಿಕ ದೀಪೋತ್ಸವ ಮಹಾಸಭಾ ನಗರ ಪಾಲಿಕೆ ಘಟಕದಿಂದ ಭಕ್ತಿಪೂರ್ವಕ ಆಚರಣೆ ಇದೀಗ ಬಂದ ಸುದ್ದಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಯುವ ಕಾಂಗ್ರೆಸ್ ನಾಯಕ ಹೆಚ್.ಪಿ. ಗಿರೀಶ್ ನೇಮಕ ಇದೀಗ ಬಂದ ಸುದ್ದಿ ಡಿಸಿ ಕಚೇರಿ ಬಳಿ ಮರ ಏರಿ ರೈತ ನಾಗರಾಜ್ ಆತ್ಮಹತ್ಯೆಗೆ ಯತ್ನ! ಜಿಲ್ಲಾ ಸುದ್ದಿ ಯುವ ಸಂಘಟನೆಗೆ ಹೊಸ ಸಾರಥಿ: ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ ಜಿಲ್ಲಾ ಸುದ್ದಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ವಕೀಲರ ಹೋರಾಟಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಸಂಸದ ಬಿ.ವೈ ರಾಘವೇಂದ್ರ ಬೆಂಬಲ ಜಿಲ್ಲಾ ಸುದ್ದಿ ಶಿವಮೊಗ್ಗದ ಮೈ ಜಿಮ್ ನಲ್ಲಿ ಆಯುಧ ಪೂಜೆ ಸಂಭ್ರಮ: ಪವರ್ ಲಿಫ್ಟಿಂಗ್, ಕಾರ್ಡಿಯೋ ವಿಜೇತರಿಗೆ ಬಹುಮಾನ ವಿತರಣೆ
ಇದೀಗ ಬಂದ ಸುದ್ದಿ

ಬಸವಣ್ಣನವರ ಅವಹೇಳನ ಸಹಿಸುವುದಿಲ್ಲ; ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ – ಬಸವ ಮರುಳಸಿದ್ಧ ಸ್ವಾಮೀಜಿ

Sathish munchemane
ವರದಿ: Sathish munchemane ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 151 ವೀಕ್ಷಣೆಗಳು

ಸರ್ವಜನಾಂಗದ ಏಳಿಗೆಗಾಗಿ ಶ್ರಮಿಸಿ, ಸಮಾನತೆ, ಪ್ರಗತಿ, ಮಾನವೀಯತೆ ಹಾಗೂ ಸರ್ವೋದಯದ ಆಶಯಗಳನ್ನು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬಸವಣ್ಣನವರು ಭಾರತೀಯ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಳವಳಿಯ ಚಲನಶೀಲ ಶಕ್ತಿಯಾಗಿದ್ದಾರೆ. ಇಂತಹ ಮಹಾನ್ ಚೇತನ ಬಸವಣ್ಣನವರ ಕುರಿತು ಹಾಗೂ ಲಿಂಗಾಯತ ಸಮುದಾಯದ ಕುರಿತು ಅಮೆರಿಕದ ಪ್ರಜೆಯಾದ ರವಿ ಹಂಜ್ ಅವರು ಖಾಸಗಿ ಯೂಟ್ಯೂಬ್ ವಾಹಿನಿಯಲ್ಲಿ ಅವಹೇಳನಕಾರಿ ಹಾಗೂ ವಿಕೃತ ವ್ಯಂಗ್ಯ ಶೈಲಿಯಲ್ಲಿ ಮಾತನಾಡಿರುವುದು ತೀವ್ರ ಖಂಡನೀಯವಾಗಿದೆ.

ಬಸವಣ್ಣನವರು ಕೇವಲ ಒಂದು ಸಮುದಾಯದ ಆರಾಧ್ಯ ವ್ಯಕ್ತಿಯಲ್ಲ; ಅವರು ಸಮಸ್ತ ಮಾನವಕುಲದ ಒಳಿತಿಗಾಗಿ ಬದುಕಿದ ಮಹಾನ್ ಸುಧಾರಕರು. ಜಾತಿ, ವರ್ಗ, ಲಿಂಗಭೇದಗಳನ್ನು ಮೀರಿ ಸಮಾನತೆ, ಸ್ವಾತಂತ್ರ್ಯ, ಕಾಯಕ, ದಾಸೋಹ ಮತ್ತು ಮಾನವ ಘನತೆಯ ಮೌಲ್ಯಗಳನ್ನು ಪ್ರತಿಪಾದಿಸಿದ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಅವರ ತತ್ವಾದರ್ಶಗಳಿಗೆ ಮಾಡುವ ಅಪಮಾನ ಮಾತ್ರವಲ್ಲದೆ, ಸಮಾಜದ ಶಾಂತಿ, ಸೌಹಾರ್ದತೆ ಮತ್ತು ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಕೃತ್ಯವೂ ಆಗಿದೆ.

ರಾಜಪ್ರಭುತ್ವದ ಕಾಲಘಟ್ಟದಲ್ಲಿ ಅನುಭವ ಮಂಟಪದ ಮೂಲಕ ಮುಕ್ತ ಚರ್ಚೆ, ಸಮಾನ ಅವಕಾಶ, ಸಾಮಾಜಿಕ ನ್ಯಾಯ ಹಾಗೂ ಪ್ರಜಾತಾಂತ್ರಿಕ ಮೌಲ್ಯಗಳ ಮಹತ್ವವನ್ನು ಜಗತ್ತಿಗೆ ಸಾರಿದ ಬಸವಣ್ಣನವರ ಆಶಯಗಳನ್ನು ಸಮಾಜದಲ್ಲಿ ಅನುಷ್ಠಾನಗೊಳಿಸಲು ಶ್ರಮಿಸುತ್ತಿರುವವರಿಗೆ ಇಂತಹ ಕೃತ್ಯಗಳು ಅಪಾರ ಮಾನಸಿಕ ನೋವನ್ನುಂಟುಮಾಡುತ್ತವೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮಹನೀಯರ ವ್ಯಕ್ತಿತ್ವವನ್ನು ವಿಕೃತಗೊಳಿಸುವುದು, ಸಮುದಾಯಗಳ ಭಾವನೆಗಳನ್ನು ಘಾಸಿಗೊಳಿಸುವುದು ಹಾಗೂ ಸಮಾಜದಲ್ಲಿ ಗೊಂದಲ ಮತ್ತು ದ್ವೇಷಕ್ಕೆ ಕಾರಣವಾಗುವ ರೀತಿಯಲ್ಲಿ ಮಾತನಾಡುವುದು ಸಮರ್ಥನೀಯವಲ್ಲ.

ಸಮಾಜದಲ್ಲಿ ಪರಸ್ಪರ ಗೌರವ, ಸಾಮರಸ್ಯ ಮತ್ತು ಸಹಬಾಳ್ವೆಯ ವಾತಾವರಣ ನಿರ್ಮಾಣವಾಗಬೇಕಾದರೆ, ಸಾರ್ವಜನಿಕ ಚರ್ಚೆಗಳಲ್ಲಿ ಜವಾಬ್ದಾರಿಯುತ ನಡವಳಿಕೆ ಅತ್ಯಗತ್ಯ. ಬಸವಣ್ಣನವರಂತಹ ವಿಶ್ವಮಾನ್ಯ ಮಹನೀಯರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ.

ಈಗಾಗಲೇ ರವಿ ಹಂಜ್ ಬರೆದ ಕೃತಿಯನ್ನು ಸರ್ಕಾರ ನಿಷೇಧ ಮಾಡಲು ತೀರ್ಮಾನಿಸಿರುವ ವಿಷಯ ನಮ್ಮ ಗಮನಕ್ಕೆ ಬಂದಿದೆ. ಆದರೆ *ಇದು ಕೇವಲ ಕೃತಿ ನಿಷೇದಕಷ್ಟೇ ಸೀಮಿತವಾಗಬಾರದು*. ಬಸವಣ್ಣನವರು ಹಾಗೂ ಲಿಂಗಾಯತ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ರವಿ ಹಂಜ್ ಮತ್ತು ಈ ಕೃತ್ಯದ ಹಿಂದೆ ಪ್ರೇರಣೆ ನೀಡಿರುವ ವ್ಯಕ್ತಿಗಳು ಅಥವಾ ಶಕ್ತಿಗಳ ವಿರುದ್ಧ ಸಂಬಂಧಪಟ್ಟ ಕಾನೂನುಗಳಡಿ ಸೂಕ್ತ ತನಿಖೆ ನಡೆಸಿ, ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸುತ್ತೇವೆ. ಸಮಾಜದ ಶಾಂತಿ, ಸೌಹಾರ್ದತೆ ಮತ್ತು ಮಹನೀಯರ ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತುರ್ತಾಗಿ ಕ್ರಮವಹಿಸಬೇಕೆಂದು ಒತ್ತಾಯಿಸುತ್ತೇವೆ.

–ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ಧ ಸ್ವಾಮಿಗಳವರು
ಶ್ರೀ ಬಸವತತ್ತ್ವ ಪೀಠ, ಚಿಕ್ಕಮಗಳೂರು- ಬಸವಕೇಂದ್ರ, ಶಿವಮೊಗ್ಗ

ಮುಖ್ಯ ಸಂಪಾದಕರು (Chief Editor) ✍️ 739 ಲೇಖನಗಳು

Sathish munchemane

Sathish munchemane ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment