ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್‍ಗೆ ಶಿವಮೊಗ್ಗ ಟಿಕೆಟ್!?

ಶಿವಮೊಗ್ಗ: ಇನ್ನೇನು ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನಗಳು ಬಾಕಿ ಇದ್ದರೂ ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡದೇ ಇರುವುದು ಕ್ಷೇತ್ರದಲ್ಲಿ ಆಕಾಂಕ್ಷಿಗಳಲ್ಲಿ ಟೆನ್ಷನ್ ಹೆಚ್ಚಾಗುತ್ತಿದೆ. ಇದರ ನಡುವೆಯೇ ಕೆ.ಈ. ಕಾಂತೇಶ್ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆ.ಎಸ್.ಈಶ್ವರಪ್ಪ ಚುನಾವಣೆ ರಾಜಕಾರಣದಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದರಿಂದ ಅವರ ಬದಲಿಗೆ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಉಂಟಾಗಿತ್ತು. ಈ ಮಧ್ಯೆ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್‍ಗಾದರೂ ಟಿಕೆಟ್ ನೀಡಬೇಕೆಂದು ವಿವಿಧ ಸಮಾಜಗಳ ಮುಖಂಡರು ಆಗ್ರಹಿಸಿದ್ದರು. ಇಷ್ಟಾದರೂ … Read more